Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದೇಶದ ಪ್ರಗತಿಗೆ ನಾರಿಯರ ಪಾತ್ರ ಪ್ರಮುಖ: ವಿಜಯೇಂದ್ರ
  • Bangalore
  • Politics
  • State

ದೇಶದ ಪ್ರಗತಿಗೆ ನಾರಿಯರ ಪಾತ್ರ ಪ್ರಮುಖ: ವಿಜಯೇಂದ್ರ

admin March 8, 2025 1 minute read
Spread the love

ಬೆಂಗಳೂರು: ದೇಶದ ಸರ್ವತೋಮುಖ ಪ್ರಗತಿಗೆ ಈ ದೇಶದ ತಾಯಂದಿರು, ನಾರಿಯರ ಪಾತ್ರ ಪ್ರಮುಖ ಮತ್ತು ಇದು ಅತ್ಯಗತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಏರ್ಪಡಿಸಿದ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಜೀ ಅವರ ಅಪೇಕ್ಷೆಯಂತೆ ಸಾಧಕರಾದ ತಾಯಿ, ಸಹೋದರಿಯರ ಸನ್ಮಾನ ಮಾಡುತ್ತಿದ್ದೇವೆ ಎಂದರು. ದೇಶದೆಲ್ಲೆಡೆ ಇದರ ಆಚರಣೆ ಅರ್ಥಪೂರ್ಣವಾಗಿ ನಡೆಯುತ್ತಿದೆ ಎಂದು ವಿವರಿಸಿದರು.

ಮನೆ ಮನೆಯಲ್ಲಿ ದೀಪ ಉರಿಸಿ, ಹೊತ್ತುಹೊತ್ತಿಗೆ ಅನ್ನ ಉಣಿಸಿ.. ಸ್ತ್ರೀ ಅಂದರೆ ಅಷ್ಟೇ ಸಾಕೇ?’ ಎಂಬ ಕವಿತೆಯ ಸಾಲುಗಳನ್ನು ತಿಳಿಸಿದ ಅವರು, ದೇಶದ ಮೊದಲ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನಮ್ಮ ಪ್ರಧಾನಿ ನರೇಂದ್ರ ಮೋದಿಜೀ ಅವರು ಆಯ್ಕೆ ಮಾಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಮೋದಿಜೀ ಅವರ ಜನಧನ್ ಸೇರಿ ಎಲ್ಲ ಯೋಜನೆಗಳು, ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮಿ ಯೋಜನೆಗಳನ್ನು ಬಿಜೆಪಿಯು ನೀಡಿದಾಗ ಅವು ಯಾವುದೇ ಜಾತಿಗೆ ಸೀಮಿತ ಆಗಿರಲಿಲ್ಲ ಎಂದು ತಿಳಿಸಿದರು. ಕೇಂದ್ರದ ಶೇ 33 ಮೀಸಲಾತಿಯಿಂದ ತಾಯಂದಿರ ಅವಕಾಶಗಳು ಹೆಚ್ಚಲಿವೆ ಎಂದರು. ಇದನ್ನೂ ಓದಿ: ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ

ಜಮೀರ್ ಅಹ್ಮದ್ ಅವರ ಬಜೆಟ್?

ರಾಜ್ಯದ ಹಣಕಾಸು ಸಚಿವ ಸಿದ್ದರಾಮಯ್ಯನವರು ಬಜೆಟ್ ಮಂಡಿಸಿದ್ದಾರೋ ಅಥವಾ ಜಮೀರ್ ಅಹ್ಮದ್ ಅವರ ಬಜೆಟ್ ಮಂಡನೆ ಮಾಡಿದ್ದಾರೋ ಎಂಬ ಭಾವನೆ ನನಗಷ್ಟೇ ಅಲ್ಲ ರಾಜ್ಯದ ಪ್ರತಿಯೊಬ್ಬ ಹಿಂದೂಗಳಿಗೂ ಅನಿಸಿರುವುದು ಸತ್ಯ ಎಂದು ತಿಳಿಸಿದರು. ಅಲ್ಪಸಂಖ್ಯಾತರಿಗೆ ವಸತಿ ಶಾಲೆ, ವಿದೇಶಕ್ಕೆ ತೆರಳುವ ಮೊತ್ತ 20 ಲಕ್ಷದ ಬದಲಾಗಿ 30 ಲಕ್ಷಕ್ಕೆ ಏರಿಸಿದ್ದಾರೆ. ಹಿಂದೂ ಮಹಿಳೆಯರು ನಿಮ್ಮ ಯೋಜನೆಗಳಿಗೆ ಅರ್ಹರಲ್ಲವೇ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸುವುದಾಗಿ ವಿಜಯೇಂದ್ರ ಅವರು ತಿಳಿಸಿದರು. ಸಿದ್ದರಾಮಯ್ಯರದು ರಾಜ್ಯದ ಅಭಿವೃದ್ಧಿಗೆ ಪೂರಕ ಬಜೆಟ್ ಖಂಡಿತವಾಗಿಯೂ ಅಲ್ಲ ಎಂದು ಟೀಕಿಸಿದರು.

ಯಡಿಯೂರಪ್ಪನವರು, ಅನಂತಕುಮಾರ್ ಜೀ ಸೇರಿ ಅನೇಕ ಹಿರಿಯರು ನಗರಸೀಮಿತ ಬಿಜೆಪಿಯನ್ನು ಪ್ರತಿಯೊಂದು ಗ್ರಾಮಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದಾರೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಭೂತಪೂರ್ವ ಬಜೆಟ್ ಕೊಟ್ಟಿದ್ದಾರೆ ಎಂದರೆ, ಇದರ ಹಿಂದಿನ ಶಕ್ತಿ ನಮ್ಮ ತಾಯಿ ಶ್ರೀಮತಿ ಮೈತ್ರಾದೇವಿ ಎಂದು ನೆನಪಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ
Next: ಧರ್ಮ ಧರ್ಮಗಳ ವಿಭಜನೆಯ ದುಸ್ಸಾಹಸ- ವಿಜಯೇಂದ್ರ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.