ಮಳವಳ್ಳಿ: ಮಳವಳ್ಳಿಯ ಶೆಟ್ಟಿಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಬಿ.ಎಂ ಪಬ್ಲಿಕ್ ಶಾಲೆಯ ಆಡಳಿತ ಹಾಗೂ ತರಗತಿ ಕೊಠಡಿಗಳ ಕಟ್ಟಡಗಳನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಉದ್ಘಾಟಿಸಿದರು. ನಂತರ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇದಕ್ಕೂ ಮುಂಚಿತವಾಗಿ ಶಾಲಾ ಆವರಣದಲ್ಲಿ ನಿರ್ಮಾಣ ಮಾಡಿರುವ ಸಾಯಿಬಾಬಾ ದೇವಾಲಯವನ್ನು ಲೋಕಾರ್ಪಣೆಗೊಳಿಸಿದರು. ದೇವಾಲಯದಲ್ಲಿ ಪೂಜೆ ಸಲ್ಲಿಸಿ ಈ ವರ್ಷ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆಯಾಗಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ತುಮಕೂರಿನ ರಾಮಕೃಷ್ಣ ವಿವೇಕಾನಂದರ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹಾಗೂ ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಮಳವಳ್ಳಿ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಶಾಸಕರಾದ ಎಚ್.ಡಿ.ರಂಗನಾಥ್, ಕೆ.ಎಂ.ಉದಯ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಬಿ.ಎಂ.ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷರಾದ ಶಂಕರಲಿಂಗೇಗೌಡ, ಕಾರ್ಯದರ್ಶಿ ಎಂ.ರಾಮಕೃಷ್ಣ ಹಾಗೂ ಇತರರು ಉಪಸ್ಥಿತರಿದ್ದರು.
