ಬೆಂಗಳೂರು: ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಆರು ತಿಂಗಳುಗಳ ಕಾಲ ಜೈಲು ಸೆರೆವಾಸ ಅನುಭವಿಸಿ ಷರತ್ತು ಬದ್ಧ ಜಾಮೀನು ಮೇಲೆ ಬಿಡುಗಡೆಯಾಗಿ ಮತ್ತೆ ಇದೀಗ ಸುಮಾರು 9 ತಿಂಗಳಗಳ ನಂತರ ಬಣ್ಣ ಹಚ್ಚಿ ಚಿತ್ರೀಕರಣಕ್ಕೆ ರೆಡಿಯಾಗಿದ್ದಾರೆ.
ಹೌದು, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೆರೆವಾಸ ಅನುಭವಿಸಿ ಬಿಡುಗಡೆಯಾಗಿ ಬಂದಿರುವ ನಟ ದರ್ಶನ್ ಅವರು ಇದೀಗ ಡೆವಿಲ್ ಸಿನಿಮಾದ ಚಿತ್ರೀಕರಣದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ: ದರ್ಶನ್-ಪವಿತ್ರಾ ಗೌಡ ಮತ್ತೆ ಮುಖಾಮುಖಿ..!?
ಮೈಸೂರಿನ ಅತಿಥಿಗೃಹದಲ್ಲಿ ಡೆವಿಲ್ ಚಿತ್ರದ ಸಿನಿಮಾ ಭರ್ಜರಿಯಾಗಿ ಚಿತ್ರೀಕರಣಗೊಳ್ಳುತ್ತಿದೆ.
ಇನ್ನು ಚಿತ್ರೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಯಾವುದೇ ರೀತಿ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಬಾಡಿಗಾರ್ಡ್ಗಳನ್ನು ನೇಮಿಸಲಾಗಿದೆ.
ಚಿತ್ರೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಮಾಧ್ಯಮದವರಿಗೆ ಯಾವುದೇ ರೀತಿ ಅನುಮತಿ ಇಲ್ಲದೆ ಚಿತ್ರೀಕರಣವನ್ನು ನಡೆಸುತ್ತಿದ್ದಾರೆ.
