Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತೆರಿಗೆ ಹಣ ಪೋಲು ನಾಚಿಕೆಗೇಡಿನ ವಿಚಾರ: ಬಿ.ವೈ.ವಿ
  • Bangalore
  • Front news
  • Politics
  • State

ತೆರಿಗೆ ಹಣ ಪೋಲು ನಾಚಿಕೆಗೇಡಿನ ವಿಚಾರ: ಬಿ.ವೈ.ವಿ

admin March 12, 2025 1 minute read
Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ ರಾಜ್ಯದ ಜನರ ತೆರಿಗೆ ಹಣವನ್ನು ಈ ಸಮಿತಿಗೆ ಸಂಬಳವಾಗಿ ನೀಡುತ್ತಿರುವುದು ನಾಚಿಗೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ಬೆಂಗಳೂರಿನ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಇಂದು (ಬುಧವಾರ ಮಾ. 12) ರಂದು ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರ, ಜಿಲ್ಲೆ, ರಾಜ್ಯಕ್ಕೆ ಒಬ್ಬರೆಂಬಂತೆ ನೇಮಿಸಿದ್ದಾರೆ. ರಾಜ್ಯ ಅಧ್ಯಕ್ಷರಿಗೆ ಲಕ್ಷಾಂತರ ವೇತನ, ಕ್ಯಾಬಿನೆಟ್ ದರ್ಜೆ ನೀಡಿದ್ದು ಖಂಡನೀಯ ಎಂದರು.

ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರ ಗೌರವಧನ ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ. ಬಿಸಿಯೂಟ ಅಡುಗೆ ಮಾಡುವವರ, ದಾದಿಯರು, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡುತ್ತಿಲ್ಲ ಎಂದು ಆಕ್ಷೇಪಿಸಿದರು. ಇದನ್ನು ನಿನ್ನೆ ಬಿಜೆಪಿ, ಜೆಡಿಎಸ್ ಸದಸ್ಯರು ಸದನದಲ್ಲಿ ಪ್ರಸ್ತಾಪಿಸಿದ್ದು, ಮಾನ್ಯ ರಾಜ್ಯಪಾಲರನ್ನೂ ಭೇಟಿ ಮಾಡಲಿದ್ದೇವೆ ಎಂದು ಪ್ರಕಟಿಸಿದರು. ಇದನ್ನೂ ಓದಿ: ಅಭಿವೃದ್ಧಿಯೇ ಕಾಣದ ಕೆಟ್ಟ ಪರಿಸ್ಥಿತಿ: ಬಿ.ವೈ.ವಿ

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತವರ ಮಕ್ಕಳನ್ನು ಗ್ಯಾರಂಟಿ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದನ್ನು ಹೈಕೋರ್ಟಿನಲ್ಲೂ ಪ್ರಶ್ನಿಸಿದ್ದೇವೆ ಎಂದು ಹೇಳಿದರು. ಗ್ಯಾರಂಟಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ, ತಹಸೀಲ್ದಾರ್ ಇಲ್ಲವೇ? ಕಾರ್ಯಕರ್ತರನ್ನು ಬಳಸಿಕೊಳ್ಳಬೇಕೇ ಎಂದು ಕೇಳಿದರು.

ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ

9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ದರಿದ್ರ ಪರಿಸ್ಥಿತಿಗೆ ರಾಜ್ಯ ಸರಕಾರ ಬಂದಿದೆ. ಅನೇಕ ಜ್ವಲಂತ ಸಮಸ್ಯೆಗಳಿವೆ ಎಂದು ಬಿ.ವೈ. ವಿಜಯೇಂದ್ರ ಅವರು ಗಮನ ಸೆಳೆದರು.

9 ವಿವಿಗಳಲ್ಲಿ ಬಡವರ ಉನ್ನತ ಶಿಕ್ಷಣಕ್ಕೆ ಕತ್ತರಿ ಹಾಕುವ ಕೆಲಸಕ್ಕೆ ಸರಕಾರ ಕೈ ಹಾಕಿದೆ. ಹಿರಿಯ ಐಪಿಎಸ್ ಅಧಿಕಾರಿಯ ಮಗಳು 30-40 ಬಾರಿ ಹೊರದೇಶಕ್ಕೆ ಹೋಗಿ ಬಂದಿರುವುದು, ಬೆಂಗಳೂರಿನಲ್ಲಿ ರಾಜಾತಿಥ್ಯ ಕುರಿತು ಪ್ರಸ್ತಾಪ ಮಾಡುತ್ತೇವೆ ಎಂದರು. ಒಂದು ಬಾರಿ 14 ಕೆಜಿ ಚಿನ್ನ ತಂದಿದ್ದರೆ, 30-40 ಬಾರಿ ಎಷ್ಟು ಚಿನ್ನ ತಂದಿರಬಹುದು ಎಂದು ಕೇಳಿದರು. ಇದರ ಹಿಂದೆ ಸಚಿವರು, ಘಟಾನುಘಟಿಗಳ ಕೈವಾಡ ಇದೆ ಎಂಬ ಮಾತು ಕೇಳಿಬರುತ್ತಿದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: 9 ತಿಂಗಳ ನಂತರ ಬಣ್ಣ ಹಚ್ಚಿದ ಡೆವಿಲ್!
Next:  ರನ್ಯಾರಾವ್ ಚಿನ್ನ ಕಳ್ಳಸಾಗಣೆಕೆ ಪ್ರಕರಣ ಸೂಕ್ತ ತನಿಖೆಯಾಗಲಿ: ಲಕ್ಷ್ಮೀ ಹೆಬ್ಬಾಳಕರ್

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.