Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜನರಿಗೆ ಶುದ್ಧ ಮತ್ತು ಸುರಕ್ಷಿತ ನೀರು ಒದಗಿಸುವುದು ನಮ್ಮ ಆದ್ಯತೆ: ಡಿಸಿಎಂ
  • Bangalore
  • Front news
  • Politics
  • State

ಜನರಿಗೆ ಶುದ್ಧ ಮತ್ತು ಸುರಕ್ಷಿತ ನೀರು ಒದಗಿಸುವುದು ನಮ್ಮ ಆದ್ಯತೆ: ಡಿಸಿಎಂ

admin March 14, 2025 1 minute read
Spread the love

ಬೆಂಗಳೂರು: ಬೆಂಗಳೂರು ಜಲಮಂಡಳಿಯ “ಪೈಪ್ ಮೂಲಕ ಕುಡಿಯುವ ನೀರು ಸರಬರಾಜು ನಿರ್ವಹಣಾ ವ್ಯವಸ್ಥೆ” ಈ ದೇಶಕ್ಕೆ ಮಾದರಿಯಾಗಿದೆ. ಕುಡಿಯುವ ನೀರಿನ ಸರಬರಾಜು ಹಾಗೂ ಗುಣಮಟ್ಟದ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ನಿಂದ ಪ್ರಮಾಣ ಪತ್ರ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೂಲಕ ಇಂತಹ ಪ್ರಮಾಣ ಪತ್ರ ಪಡೆದ ದೇಶದ ಮೊದಲ ಹಾಗೂ ಏಕೈಕ ಜಲಮಂಡಳಿಯಾಗಿ ಹೊರಹೊಮ್ಮಿದೆ ಎಂದುಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರು ಜಲ ಮಂಡಿಳಿ ನೀರು ಸರಬರಾಜು ನಿರ್ವಹಣೆ ಘಟಕಕ್ಕೆ (ಗುರುವಾರ ಮಾರ್ಚ್ 13) ರಂದು ಭೇಟಿ ನೀಡಿ ಮಾತನಾಡಿದ ಅವರು, ಕಳೆದ 6 ತಿಂಗಳಿನಿಂದ ವಿವಿಧ ಹಂತಗಳಲ್ಲಿ ನಡೆದ ಪರೀಕ್ಷೆಗಳಲ್ಲಿ ನೀರು ಸರಬರಾಜು ವ್ಯವಸ್ಥೆಯಲ್ಲಿ ಅಳವಡಿಸಿಕೊಂಡಿರುವ ಅಂತರಾಷ್ಟ್ರೀಯ ಮಾನದಂಡಗಳ ಬಗ್ಗೆ ಬಿಐಎಸ್‌ ತಂಡ ಶ್ಲಾಘಿಸಿದ್ದು, ಬಿಐಎಸ್‌ ನ ಕಠಿಣ ಪರೀಕ್ಷೆಯಲ್ಲಿ ಬೆಂಗಳೂರು ಜಲಮಂಡಳಿ ಪಾಸ್‌ ಆಗಿದೆ. ಪೈಪ್ ಮೂಲಕ ಸ್ವಚ್ಛ, ಆರೋಗ್ಯಕರ ನೀರು ಸರಬರಾಜು ಮಾಡುತ್ತಿರುವ ಹಿನ್ನೆಲೆಯಲ್ಲಿ ಜಲ ಮಂಡಳಿಗೆ ಈ ಪ್ರಮಾಣ ಪತ್ರ ದೊರೆತಿದ್ದು ಇಂತಹ ಪ್ರಮಾಣ ಪತ್ರ ಪಡೆದಿರುವ ದೇಶದ ಏಕೈಕ ನೀರು ಸರಬರಾಜು ಮಂಡಳಿಯಾಗಿ ಹೊರಹೊಮ್ಮಿದೆ. ಇದನ್ನೂ ಓದಿ: ಗೊಂದಲಕ್ಕೀಡಾದ ಬಿಜೆಪಿ ಅಧ್ಯಕ್ಷರ ಸನ್ಮಾನ ಕಾರ್ಯಕ್ರಮ

ಈ ಕುರಿತಂತೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , “ನಗರದ ಜನರಿಗೆ ಶುದ್ಧ ಮತ್ತು ಸುರಕ್ಷಿತ ನೀರು ಒದಗಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಬಿಐಎಸ್ ಪ್ರಾಮಾಣೀಕರಣ ಪಡೆದ ದೇಶದ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆಗೆ ಜಲ ಮಂಡಳಿಯದ್ದಾಗಿರುವುದು ಹೆಮ್ಮೆಯ ವಿಚಾರ”, ಎಂದು ಹೇಳಿದ್ದಾರೆ.

“ನಾವು ನೀರಿನ ಗುಣಮಟ್ಟ ಮತ್ತು ಸುರಕ್ಷತೆಗೆ ವಿಶೇಷ ಮಾನದಂಡ ಹೊಂದಿದ್ದೇವೆ. ಇದು ಸಾರ್ವಜನಿಕ ಸೇವೆಗಳು ಮತ್ತು ನಗರ ಸುಸ್ಥಿರತೆಯಲ್ಲಿ ಅತ್ಯುನ್ನತ ಮಾನದಂಡಗಳನ್ನು ಅಳವಡಿಸಿಕೊಳ್ಳುವ ನಗರವಾಗಿ ಬ್ರ್ಯಾಂಡ್ ಬೆಂಗಳೂರು ಉಪಕ್ರಮಕ್ಕೆ ಇನ್ನಷ್ಟು ಶಕ್ತಿ ನೀಡಲಿದೆ.  ಸುಸ್ಥಿರ ನೀರಿನ ನಿರ್ವಹಣೆ ಮತ್ತು ಗುಣಮಟ್ಟದ ಜೀವನಕ್ಕಾಗಿ ಬೆಂಗಳೂರನ್ನು ಮಾದರಿ ನಗರವಾಗಿ ರೂಪಿಸಲು ನಾವು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತೇವೆ. ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಅಂತರಾಷ್ಟ್ರೀಯ ಮಾನದಂಡಗಳನ್ನು ಅಳವಡಿಸಿಕೊಂಡು ಗುಣಮಟ್ಟವನ್ನು ಕಾಯ್ದುಕೊಂಡಿರುವ ಬೆಂಗಳೂರು ಜಲಮಂಡಳಿಯ ಎಲ್ಲರೂ ಅಭಿನಂದನೆಗೆ ಅರ್ಹರು”, ಎಂದು ತಿಳಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಗೊಂದಲಕ್ಕೀಡಾದ ಬಿಜೆಪಿ ಅಧ್ಯಕ್ಷರ ಸನ್ಮಾನ ಕಾರ್ಯಕ್ರಮ
Next: ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.