ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವೊಂದು ಅಭಿವೃದ್ಧಿ ಕಾರ್ಯ ಮಾಡದೆ ಕೇವಲ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಕಾಲಹರಣ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಿಸಿದೆ.
ಇಂದು (ಶನಿವಾರ ಮಾ. 15) ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿತು.
ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ರಮೇಶ್ ಗೌಡ ಅವರು, ಆಡಳಿತ ವಿಕೇಂದ್ರೀಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದಿಂದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ನ್ನ ವಿಧಾನಸಭೆಯಲ್ಲಿ ಅಂಗೀಕಾರಾ ಮಾಡಲಾಯಿತು. ಇದನ್ನೂ ಓದಿ: ಕಾಂಗ್ರೆಸ್ 2 ವರ್ಷಗಳಿಂದ ಜನ ವಿರೋಧಿ ನೀತಿ ಅನುಸರಿಸುತ್ತಿದೆ: ಜೆಡಿಎಸ್
ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳಿಂದ ಜನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಜನರಿಗೆ ನಿತ್ಯ ನರಕ ತೋರಿಸುತ್ತಿದ್ದಾರೆ. ಕೆಂಪೇಗೌಡರು ಬೆಂಗಳೂರು ಕಟ್ಟಿದ್ರೇ… ಕಾಂಗ್ರೆಸ್ ಸರ್ಕಾರ ಮಾತ್ರ ಬೆಂಗಳೂರನ್ನ ಛಿದ್ರ ಛಿದ್ರ ಮಾಡಲು ಮುಂದಾಗುತ್ತಿದ್ದಾರೆ.
ಬೆಂಗಳೂರು ಅನೇಕ ಸಮಸ್ಯೆ ಎದುರಿಸುತ್ತಿದೆ. ನೀರಿಲ್ಲ, ಟ್ರಾಫಿಕ್ ಜಾಮ್ ಸೇರಿ ಅನೇಕ ಸಮಸ್ಯೆ ಇದೆ. ಈ ಸರಕಾರದಲ್ಲಿ ಜನರು ನಿತ್ಯ ಸತ್ತು ಬದುಕುತ್ತಿದ್ದಾರೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಬಾರದು. ಕೂಡಲೇ ಸರ್ಕಾರ ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಪಡೆಯಬೇಕು ಎಂದರು.
