ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಜವಾಬ್ದಾರಿಯು ರಾಜ್ಯ ಸರ್ಕಾರದ ಮೇಲಿದೆ ಹಾಗಾಗಿ ಅವರ ಕುಂದು ಕೊರತೆಗಳನ್ನು ಆಲಿಸುವುದು ನಮ್ಮ ಸರ್ಕಾರದ ಆದ್ಯತೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.
ನಗರದಲ್ಲಿಂದು ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ನೇತೃತ್ವದ ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದನ್ನೂ ಓದಿ: ಸುನೀತಾ ವಿಲಿಯಮ್ಸ್ಗೆ ಪ್ರಧಾನಿ ಮೋದಿ ಸ್ವಾಗತ
2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಪಾವತಿ ಮಾಡುವ ಕುರಿತು, ಅಂಗನವಾಡಿಯ ವಿವಿಧ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಚರ್ಚೆ ನಡೆಸಿದರು.
ಗೌರವಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ.
