ಬೆಂಗಳೂರು: ಬೆಂಗಳೂರಿಗೆ ಸಂಬಂಧಿಸಿದಂತೆ ಇಂದು (ಸೋಮವಾರ ಮಾ 24) ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರು ನಗರದ ಶಾಸಕರ ಜೊತೆ ಮಹತ್ವದ ಸಭೆ ನಡೆಸಿದರು.
ಈ ಸಭೆಯಲ್ಲಿ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಸಾಲಿನಲ್ಲಿ ಬಿಬಿಎಂಪಿಯ ಬಜೆಟ್ ಕುರಿತಾಗಿ ಎಲ್ಲಾ ಶಾಸಕರ ಜೊತೆ ಮಾತನಾಡಿ, ನಗರಕ್ಕೆ ಯಾವೆಲ್ಲ ಅವಶ್ಯಕತೆ ಇದೆ, ರಸ್ತೆಗಳು ಸೇರಿದಂತೆ ಮೆಟ್ರೋ ಹಾಗೂ ಚರಂಡಿ ಕಾಮಗಾರಿಯನ್ನು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಇಂದು ಚರ್ಚಿಸಲಾಯಿತು ಎಂದರು. ಇದನ್ನೂ ಓದಿ: ಸಿಎಂ ನೇತೃತ್ವದಲ್ಲಿಂದು ಸಭೆ
ಈ ಸಂದರ್ಭದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ಶಾಸಕರಾದ ಎಸ್.ಟಿ. ಸೋಮಶೇಖರ್, ರಿಜ್ವಾನ್ ಅರ್ಷದ್, ಎನ್ ಎ ಹ್ಯಾರಿಸ್, ಎ ಸಿ ಶ್ರೀನಿವಾಸ್, ಎಂಎಲ್ಸಿ ನಾಗರಾಜ್ ಯಾದವ್, ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್, ಬಿ ಡಬ್ಲ್ಯೂ ಎಸ್ ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್, ಡಿಸಿಎಂ ಕಾರ್ಯದರ್ಶಿ, ಬಿಎಂಆರ್ಸಿಎ ಕಮಿಷನರ್ ರಾಜೇಂದ್ರ ಚೋಳನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದ
