ಬೆಂಗಳೂರು: ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ಇಂದು (ಗುರುವಾರ ಮಾ. 27) ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಇದನ್ನೂ ಓದಿ: ಯತ್ನಾಳ್ ಶಾಸಕ ಸ್ಥಾನದ ಕಥೆ ಏನಾಗಬಹುದು?
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
