ಬೆಂಗಳೂರು: ರಾಜ್ಯದ ಜನ ಬೆಲೆ ಏರಿಕೆಗೆ ಸುಸ್ತಾಗಿರುವ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ.
ಹೌದು, ರಾಜ್ಯದಲ್ಲಿ ಪ್ರತಿಯೊಂದು ವಸ್ತುವಿನ ಬೆಲೆ ಗಗನಕ್ಕೆರಿರುವ ಬೆನ್ನಲ್ಲೇ ಮತ್ತೆ ಇದೀಗ ನಂದಿನಿ ಹಾಲಿನ ಬೆಲೆಯನ್ನು ಏರಿಕೆ ಮಾಡಿ ಜನರಿಗೆ ಮತ್ತಷ್ಟು ಸಂಕಷ್ಷ ಬಂದಂತಾಗಿದೆ
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಷ್ಟು ಹೆಚ್ಚಳ ಮಾಡಬೇಕೆಂಬ ಬಗ್ಗೆ ಸಮಾಲೋಚನೆ ಮಾಡಲಾಯಿತು. ಅಂತಿಮವಾಗಿ 4 ರೂ. ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನೂ ಓದಿ: ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿ ಸಿಎಂಗೆ ಸಲ್ಲಿಕೆ
ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಡ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಡ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.
