Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರಕ್ಕಿಂತ  ಪಕ್ಷ ದೊಡ್ಡದು: ಡಿಕೆಶಿ
  • Front news
  • Politics

ಸರ್ಕಾರಕ್ಕಿಂತ  ಪಕ್ಷ ದೊಡ್ಡದು: ಡಿಕೆಶಿ

admin March 29, 2025 1 minute read
Spread the love

ನವದೆಹಲಿ: ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಿದ್ದಾರೆ. ಪಕ್ಷವು ಸರ್ಕಾರಕ್ಕಿಂತ ದೊಡ್ಡದು, ಹೀಗಾಗಿ ಹೈಕಮಾಂಡ್ ನಾಯಕರು ಜಿಲ್ಲಾ ಅಧ್ಯಕ್ಷರಿಗೆ ವಿಶೇಷ ಕಾರ್ಯಕ್ರಮ ನೀಡಿದ್ದಾರೆ ಎಂದರು.

ಈ ಸಭೆ ವೇಳೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡುವ ಸಂದರ್ಭದಲ್ಲಿ ನಿಮ್ಮ ಅಭಿಪ್ರಾಯ ಪಡೆಯಲಾಯಿತೇ?, ನಿಮ್ಮನ್ನು ವಿಶ್ವಾಸಕ್ಕೆ ಪಡೆದರೆ ಎಂದು ಕೇಳಿದ್ದಾರೆ. ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ” ಎಂದು ಹೇಳಿದರು. ಇದನ್ನೂ ಓದಿ:

ಸದಸ್ಯತ್ವ ಅಭಿಯಾನ ಹೇಗೆ ಮಾಡಬೇಕು, ಮತದಾರರ ಪಟ್ಟಿ ಪರಿಶೀಲನೆ, ಬಿಎಲ್ ಓಗಳ ನೇಮಕ, ಸಾಮಾಜಿಕ ಜಾಲತಾಣಗಳ ಪರಿಣಾಮ ಬಳಕೆ, ಪಕ್ಷಕ್ಕೆ ದೇಣಿಗೆ ಸಂಗ್ರಹ ಸೇರಿದಂತೆ ಅನೇಕ ಮಾರ್ಗದರ್ಶನ ನೀಡಿದರು. ಮುಂದೆ ಗುಜರಾತಿನಲ್ಲಿ ನಡೆಯಲಿರುವ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಶಕ್ತಿ ತುಂಬುವ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು, ತಮ್ಮ ಉಸ್ತುವಾರಿ ಜಿಲ್ಲೆಗೆ ಭೇಟಿ ನೀಡಿದಾಗ ಅಲ್ಲಿನ ಕಾಂಗ್ರೆಸ್ ಕಚೇರಿಗೆ ಹೋಗಿ ಕಾರ್ಯಕರ್ತರನ್ನು ಭೇಟಿ ಮಾಡಬೇಕು. ಜಿಲ್ಲಾ ಪ್ರವಾಸ ಮಾಡುವಾಗ ಜಿಲ್ಲಾ ಅಧ್ಯಕ್ಷರನ್ನು ಜತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಅಧ್ಯಕ್ಷರುಗಳು ಕೂಡ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದು, ನೀವು ಯಾರ ಮೇಲೂ ಅವಲಂಬಿತರಾಗಬೇಡಿ ನಾವು ನಿಮಗೆ ರಕ್ಷಣೆ ನೀಡುವುದಾಗಿ ಧೈರ್ಯ ತುಂಬಿದರು. ಪಕ್ಷ ಸಂಘಟನೆಗೆ ಹೊಸ ಸ್ವರೂಪ ನೀಡಲು ಮಲ್ಲಿಕಾರ್ಜುನ ಖರ್ಗೆ ಅವರು ಕೈಗೊಂಡಿರುವ ಹೊಸ ಕ್ರಮಗಳನ್ನು ನಾನು ಸ್ವಾಗತಿಸುತ್ತೇನೆ” ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಬಿಜೆಪಿಯವರು ಅಭಿವೃದ್ದಿ ಕೆಲಸಗಳಿಗೆ ಅಡ್ಡಗಾಲು ಹಾಕಬೇಡಿ
Next: ಕನ್ನಡದ ಸಾಧಕರನ್ನ ಗುರುತಿಸಿ ವಿಶ್ವ ಮಟ್ಟದ ವೇದಿಕೆಗಳಲ್ಲಿ ಗ್ಲೋಬಲ್ ಐಕಾನ್ ಅವಾರ್ಡ್

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.