Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್: ವಿಜಯೇಂದ್ರ
  • Bangalore
  • Front news
  • Politics
  • State

ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್: ವಿಜಯೇಂದ್ರ

admin April 2, 2025 1 minute read
Spread the love

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು (ಬುಧವಾರ ಏ. 02) ರಂದು ಬಿಜೆಪಿಯ ಅಹೋರಾತ್ರಿ ಧರಣಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನುಡಿದಂತೆ ನಡೆದ ಸರಕಾರ ಎಂದು ಜಾಹೀರಾತು ನೀಡುತ್ತಿದ್ದಾರೆ. ಇದು ಮನುಷ್ಯತ್ವ ಇರುವ ಸರಕಾರ ಅಲ್ಲ; ಅಧಿಕಾರಕ್ಕೆ ಬಂದ ಕೇವಲ 24 ಗಂಟೆಗಳಲ್ಲಿ ಗ್ಯಾರಂಟಿ ಅನುಷ್ಠಾನ ಮಾಡುವುದಾಗಿ ಹೇಳಿದ್ದರು. ಆದರೆ, ತಿಂಗಳುಗಳೇ ಕಳೆದರೂ ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನ ಆಗಿಲ್ಲ ಎಂದು ಆಕ್ಷೇಪಿಸಿದರು. ಇದನ್ನೂ ಓದಿ:

ಕುರ್ಚಿಯ ಅಭದ್ರತೆ ಕಾಡುತ್ತಿದ್ದರೆ..

ಮುಖ್ಯಮಂತ್ರಿಗಳೇ ದಯವಿಟ್ಟು ನಿಮ್ಮ ಎ.ಸಿ. ರೂಮಿನಿಂದ ಹೊರಕ್ಕೆ ಬನ್ನಿ. ನೀವು ಬೆಂಗಳೂರಿನ ಸಿಎಂ ಅಲ್ಲ; ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸಚಿವರ ಜೊತೆ ಪ್ರವಾಸ ಮಾಡಿ ಎಂದು ವಿಜಯೇಂದ್ರ ಅವರು ಆಗ್ರಹಿಸಿದರು.

ಸಿದ್ದರಾಮಯ್ಯನವರೇ, ಹಿಂದೆ ರಾಜ ಮಹಾರಾಜರು ಮಾರುವೇಷದಲ್ಲಿ ತೆರಳಿ ಪ್ರಜೆಗಳ ಯೋಗಕ್ಷೇಮ ವಿಚಾರಿಸುತ್ತಿದ್ದರು. ಬಳಿಕ ಜನರಿಗೆ ಅನುಕೂಲ ಆಗುವ ಯೋಜನೆ ಜಾರಿಗೊಳಿಸುತ್ತಿದ್ದರು. ಮಹಾರಾಜರ ಸ್ಥಾನದಲ್ಲಿರುವ ನೀವು ಕುರ್ಚಿಯ ಅಭದ್ರತೆ ಕಾಡುತ್ತಿದ್ದರೆ ಡಿ.ಕೆ.ಶಿವಕುಮಾರರನ್ನೂ ಜೊತೆಗೇ ಕರೆದುಕೊಂಡು ಹೋಗಿ ಎಂದು ವ್ಯಂಗ್ಯವಾಗಿ ತಿಳಿಸಿದರು. ಬಿತ್ತನೆ ಬೀಜದ ದರ ಹೆಚ್ಚಾಗಿದೆ. ಕಳೆದ 20 ತಿಂಗಳ ಆಡಳಿತದಲ್ಲಿ ಜನರು ಖುಷಿ ಆಗಿದ್ದಾರಾ ಎಂಬ ಬಗ್ಗೆ ಅರಿತುಕೊಳ್ಳಲು ರಾಜ್ಯ ಪ್ರವಾಸ ಮಾಡಿ ಎಂದು ಆಗ್ರಹಿಸಿದರು.

ಮಹಿಳೆಯರಿಗೆ 2 ಸಾವಿರ, ಪುಕ್ಕಟೆ ವಿದ್ಯುತ್ ಸೇರಿ ವಿವಿಧ ಯೋಜನೆಗಳ ಕುರಿತು ಭಾಷಣ ಮಾಡುತ್ತಾರೆ. ಆದರೆ, ಅವುಗಳು ಸರಿಯಾಗಿ ಅನುಷ್ಠಾನ ಆಗಿಲ್ಲ ಎಂದು ದೂರಿದರು. ಇದು ಜನರ ಮೇಲೆ ಬೆಲೆ ಏರಿಕೆಯ ಬರೆ ಎಳೆಯುವ ಸರಕಾರ ಎಂದು ಆರೋಪಿಸಿದರು.

ಬಡವರು, ರೈತರು, ಜನಸಾಮಾನ್ಯರು ಇವತ್ತು ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲದ ದುಸ್ಥಿತಿ ಬಂದಿದೆ. ಪೆಟ್ರೋಲ್, ಡೀಸೆಲ್, ಹಾಲಿನ ದರ, ಸರಕಾರಿ ಆಸ್ಪತ್ರೆಗಳ ಶುಲ್ಕ ಹೆಚ್ಚಿಸಿದ್ದಾರೆ ಎಂದು ಟೀಕಿಸಿದರು. ನಿನ್ನೆಯಷ್ಟೇ ಡೀಸೆಲ್ ಬೆಲೆ 2 ರೂ. ಹೆಚ್ಚಿಸಿದ್ದಾರೆ ಎಂದು ಟೀಕಿಸಿದರು. ಇದರಿಂದ ಸರಕುಗಳ ದರವೂ ಹೆಚ್ಚಾಗಲಿದೆ ಎಂದು ತಿಳಿಸಿದರು.

 

 

About the Author

admin

Administrator

Visit Website View All Posts

Spread the love

Post navigation

Previous: ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ಬಹಳ ದೊಡ್ಡದು: ಸಿಎಂ
Next: ಬಿಜೆಪಿಗರು ರೈತ ವಿರೋಧಿಗಳು: ಡಿಕೆಶಿ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.