ದೆಹಲಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದನ್ನೂ ಓದಿ: ಕರ್ನಾಟಕ ಭವನ ಲೋಕಾರ್ಪಣೆ
ಹೌದು, ನಿನ್ನೆ (ಬುದುವಾರ ಏ. 02) ರಂದು ಸಿಎಂ ಡಿಸಿಎಂ ಅವರು ದೆಹಲಿಗೆ ಭೇಟಿ ನೀಡಿ 138 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕರ್ನಾಟಕ ಭವನವನ್ನು ಉದ್ಘಾಟಿಸಿದರು.
ಇನ್ನು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು
