Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಸಿಎಂ ಕರೆ
  • Bangalore
  • Politics
  • State

ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಸಿಎಂ ಕರೆ

admin April 7, 2025 1 minute read
Spread the love

ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ: ಬೆಲೆ ಏರಿಕೆ, ಲೂಟಿ ಮಾಡುವುದೇ ಕಾಂಗ್ರೆಸ್‌ನ ಸ್ಟೈಲ್‌: ಆರ್ ಅಶೋಕ್

ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದರು.

ವಾಹನ ಚಾಲಕರಿಗೂ ಕಾಯಂ

ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ  ಪ್ರತಿಭೆ ಹೊರಗೆ ಬರುತ್ತದೆ ಎಂದರು.

ನಗದು ರಹಿತ ಆರೋಗ್ಯ ಕಾರ್ಡ್

ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ  ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಬೆಲೆ ಏರಿಕೆ, ಲೂಟಿ ಮಾಡುವುದೇ ಕಾಂಗ್ರೆಸ್‌ನ ಸ್ಟೈಲ್‌: ಆರ್ ಅಶೋಕ್
Next: ಬಿವೈವಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾ: ಸಿಎಂ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.