ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿ 17 ಜನ ಆರೋಪಿಗಳಿಗೆ ಷರತ್ತುಬದ್ಧ ಜಾಮೀನನ್ನು ಮಂಜೂರು ಮಾಡಲಾಗಿದ್ದು ಈಗಾಗಲೇ ದರ್ಶನ್ ಹಾಗೂ ಪವಿತ್ರ ಅವರು ಜಾಮೀನಿನ ಮೇಲೆ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಚಿತ್ರೀಕರಣವನ್ನು ಮುಗಿಸಿಕೊಂಡು ವಾಪಸ್ ಆಗಿದ್ದಾರೆ.
ಇನ್ನು ರೇಣುಕಾ ಸ್ವಾಮಿ ಕೇಸ್ ಗೆ ಸಂಬಂಧಿಸಿದಂತೆ ಇಂದು (ಮಂಗಳವಾರ ಏ 08) ರಂದು 17 ಆರೋಪಿಗಳು ನಗರದ 57ನೇ ಸಿಸಿಎಚ್ ಕೋರ್ಟಿಗೆ ಹಾಜರಾಗಲಿದ್ದಾರೆ ಇದರಿಂದ ಹಲವು ದಿನಗಳ ನಂತರ ನಟ ದರ್ಶನ್ ಹಾಗೂ ಪವಿತ್ರ ಗೌಡ ಮುಖಾಮುಖಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ:ರಾಜಸ್ಥಾನದಿಂದ ಬೆಂಗಳೂರಿಗೆ ವಾಪಾಸಾದ ʼಡೆವಿಲ್ʼ
ಹೈಕೋರ್ಟ್ನಿಂದ ಜಾಮೀನು ಪಡೆದಿರುವ ದರ್ಶನ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾಮೀನು ರದ್ದುಗೊಳಿಸುವಂತೆ ಕೋರಿ ಪೊಲೀಸ್ ಅಧಿಕಾರಿಗಳು ಸುಪ್ರೀಂಕೋರ್ಟ್ಗೆ ಹೋಗಿದ್ದಾರೆ. ಈಗಾಗಲೇ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ, ಮುಂದಿನ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿಕೆ ಮಾಡಿದೆ.
