ಬೆಂಗಳೂರು: ಇಂದು ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ1ರ ಪಲಿತಾಂಶ ಪ್ರಕಟವಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಹೌದು, ಇಂದು (ಮಂಗಳವಾರ ಏ. 08) ರಂದು ರಾಜ್ಯದಲ್ಲಿ ದಿ ದ್ವಿತೀಯ ಪಿಯುಸಿಯ 1ರ ಫಲಿತಾಂಶ ಪ್ರಕಟವಾಗಿದ್ದು ಕಲಾ ವಿಭಾಗದಲ್ಲಿ ಈ ಬಾರಿ ವಿದ್ಯಾರ್ಥಿನಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಜನಾ ಭಾಯಿ 600ಕ್ಕೆ 597 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಬಾರಿಯ ಪಿಯು ಪರೀಕ್ಷೆಯಲ್ಲಿ ಬಾಲಕಿಯರು 77.88 ಶೇಕಡಾವಾರು ಉತ್ತೀರ್ಣ ಆಗಿದ್ದಾರೆ. ಬಾಲಕರು 68.20 ಶೇಕಡಾವಾರು ಉತ್ತೀರ್ಣರಾಗಿದ್ದಾರೆ.
ಮಾ. 1 ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ಪಿಯು ಪರೀಕ್ಷೆ ನಡೆದಿತ್ತು. ಒಟ್ಟು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು. ಏಪ್ರಿಲ್ 3 ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟವಾಗಿದೆ.
