ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದಲ್ಲಿ ಎರಡನೇ ಬಾರಿ ಸಿಎಂ ಆದ ಬಳಿಕ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹಲವಾರು ಸವಾಲುಗಳನ್ನು ಎದುರಿಸಿರುವ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು 500 ಕೋಟಿ ಕಿಕ್ ಬ್ಯಾಂಕ್ ಆರೋಪ ಕೇಳಿ ಬಂದಿದ್ದು, ಈ ಕುರಿತು ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಾಸಿಕ್ಯೂಷನ್ಗೆ ಅನುವತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್ಬ್ಯಾಕ್ ಪಡೆದ ಆರೋಪ ಅವರ ವಿರುದ್ಧ ಕೇಳಿಬಂದಿದ್ದು, ಈ ವಿಚಾರವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು 2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಅವರಯ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ಕೂಡ ನವೀಕರಣ ಮಾಡಲಾಗಿತ್ತು. ಸಾಕಷ್ಟು ವರ್ಷಗಳಿಂದ ಬಾಕಿ ಇದ್ದ ಲೈಸೆನ್ಸ್ ನವೀಕರಣ ಮಾಡಲಾಗಿತ್ತು. ಹಾಗೆ ನವೀಕರಣ ಮಾಡಿಕೊಟ್ಟಿದ್ದಕ್ಕೆ ಕಿಕ್ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 500 ಕೋಟಿ ರೂ. ಕಿಕ್ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಸರ್ಕಾರಕ್ಕೆ 500 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
