ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲು ಸೇರವಸ ಅನುಭವಿಸುತ್ತಿದ್ದಾರೆ.
ಅತ್ಯಾಚಾರ ವ್ಯಸಗಿ ಹಲವು ದಿನಗಳ ಕಾಲ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ, ಅದು ಹೇಗೋ ರಾಜ್ಯಕ್ಕೆ ಮರಳಿ ಪೊಲೀಸ್ ಅಧಿಕಾರಿಗಳಿಗೆ ಶರಣಾಗಿ ಇದೀಗ ಜೈಲು ಸೇರವಸ ಅನುಭವಿಸುತ್ತಿರುವ ಅವರಿಗೆ ಮತ್ತೊಂದು ಶಾಕ್ ಎದುರಾಗಿದೆ.
ಹೌದು, ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ. ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಕ್ರೈಮ್ ನಂಬರ್ 20ರಲ್ಲಿ ಪ್ರಜ್ವಲ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಇದರಿಂದ ಸದ್ಯ ಅಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾಗಿದೆ. ಇದನ್ನೂ ಓದಿ: ರಿಕ್ಕಿ ರೈ ಮೇಲಿನ ದಾಳಿ ಪ್ರಕರಣಕ್ಕೆಇದೀಗ ಬಿಗ್ ಟ್ವಿಸ್ಟ್!
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳು ಹೈಕೋರ್ಟ್ನಲ್ಲಿ ವಜಾಗೊಂಡಿವೆ. ಅಲ್ಲದೇ ಸುಪ್ರೀಂಕೋರ್ಟ್ನಲ್ಲೂ ಸಹ ವಜಾಗೊಂಡಿತ್ತು. ಸದ್ಯ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
