Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ-ಡಿಸಿಎಂಗಳಿಗೆ ಬೆದರಿಕೆ ಸಂದೇಶ!
  • Bangalore
  • Crime
  • Front news
  • Politics
  • State

ಸಿಎಂ-ಡಿಸಿಎಂಗಳಿಗೆ ಬೆದರಿಕೆ ಸಂದೇಶ!

admin April 24, 2025 1 minute read
Spread the love

ಬೆಂಗಳೂರು: ಕಾಶ್ಮೀರದಲ್ಲಿ ನಡೆದ ಭೀಕರ ದಾಳಿಯಿಂದಾಗಿ ಇಡೀ ದೇಶವೇ ಬೆಚ್ಚಿಬಿದ್ದಿದ್ದು, ಇದೀಗ ಕರ್ನಾಟಕ ರಾಜ್ಯದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೊಲೆ ಮಾಡುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶವನ್ನು ಬಂದಿದೆ.

ಹೌದು, ಕಾಶ್ಮೀರ ದಾಳಿ ಇನ್ನೂ ಕೂಡ ಮಾಸಿಲ್ಲ ಆದರೆ ಕರ್ನಾಟಕ ರಾಜ್ಯದಲ್ಲಿ ಬೆದರಿಕೆ ಕರೆ ಒಂದು ಇಡೀ ರಾಜ್ಯದ ಜನರಲ್ಲಿ ಆತಂಕ ಮೂಡಿಸಿದೆ.

ಸಿಎಂ- ಡಿಸಿಎಂ ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್‌ ಮತ್ತು ಟ್ರ್ಯಾಲಿ ಬ್ಯಾಗ್‌ಗೆ ತುಂಬುವುದಾಗಿ ಇ–ಮೇಲ್‌ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಈ ಸಂದೇಶ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಂಧಾರ್‌ ರಜಪೂತ್‌ ಹೆಸರಿನ ಇ–ಮೇಲ್‌ನಿಂದ ಈ ಬೆದರಿಕೆ ಸಂದೇಶ ಬಂದಿದೆ ಎಂಬುದು ಗೊತ್ತಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಬೆದರಿಕೆ ಇ–ಮೇಲ್‌ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌, ಗೃಹ ಸಚಿವರು, ನಗರ ಪೊಲೀಸ್‌ ಕಮಿಷನರ್‌ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ: ಸಿಎಂ

ರಾಮಪುರ ಪ್ರಭಾಕರ್​ಗೆ ಒಂದು ಕೋಟಿ ಸಾಲ ಕೊಟ್ಟಿದ್ದೇನೆ. ಆತ ಇದುವರೆಗೂ ಸಾಲ ವಾಪಸ್ ಕೊಟ್ಟಿಲ್ಲ. ಪ್ರಭಾಕರ್​ಗೆ ಬೇಗ ಸಾಲ ವಾಪಸ್ ಕೊಡೋಕೆ‌ ಹೇಳಿ. ಆ ಪ್ರಭಾಕರ್ ಹಣವನ್ನು ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಇಟ್ಟಿದ್ದಾನೆ ಎಂದು ಬರೆಯಲಾಗಿದೆ. ಪ್ರಭಾಕರ್ ಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಒಬ್ಬ ಮಗನಿಗೆ ಮದುವೆ ಮಾಡಿದ್ದಾನೆ. ಸಾಲದ ಹಣವನ್ನು ವಾಪಸ್ ನೀಡಲು ಆತನಿಗೆ ಆದಾಯ ಮೂಲ ಇಲ್ಲ. ಹೀಗಾಗಿ ಪ್ರಭಾಕರ್ ನ ಕೊಲೆ ಮಾಡ್ತೀನಿ. ನೀವು ಹಣ ಕೊಡಿಸಿಲ್ಲ ಅಂದ್ರೆ ನಿಮ್ಮನ್ನು ಕೊಲೆ ಮಾಡ್ತೀನಿ ಅಂತ ಇ‌ಮೇಲ್ ಮಾಡಿದ್ದಾನೆ.

ಸದ್ಯ ಇ ಮೇಲ್ ಆಧರಿಸಿ ದೂರು ದಾಖಲಿಸಿರೋ ಪೊಲೀಸರು, ಎಫ್ ಐ ಆರ್ ದಾಖಲಿಸಿ ಸಿಂದಾರ್ ರಜಪೂತ್ ಗಾಗಿ ಹುಡುಕಾಟ ನಡೆಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಕಾಂಗ್ರೆಸ್ಸಿನವರಿಗೆ ಹಿಂದೂಗಳು ಕಾಣುತ್ತಿಲ್ಲ; ಇದು ದೇಶದ ದುರ್ದೈವ: ಬಿವೈವಿ
Next: ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ: ಸಿಎಂ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.