Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • “ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿಸಿಎಂ
  • Bangalore
  • Front news
  • Politics
  • State

“ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿಸಿಎಂ

admin April 28, 2025
Spread the love

ಬೆಂಗಳೂರು: ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು.

ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ. ಈ ಹಿಂದೆ ಸಣ್ಣ, ಸಣ್ಣ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸೆದ ಉದಾಹರಣೆಗಳನ್ನು ನೋಡಿದ್ದೇವೆ. ಇದರ ವಿರುದ್ಧ ಜನರೇ ಆಕ್ರೋಶ ವ್ಯಕ್ತಪಡಿಸಬೇಕು” ಎಂದರು.

ಬೆಲೆ ಏರಿಕೆಗೆ ಕೇಂದ್ರವೇ ಕಾರಣ

“ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ ಮೂಡಿಸಿ ಹಾಗೂ ಸಂವಿಧಾನ ರಕ್ಷಣೆಗೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ನಾನು, ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಭಾಗವಹಿಸುತ್ತಿದ್ದೇವೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಹೋರಾಟ ಮಾಡಲಿದ್ದೇವೆ” ಎಂದರು.

“ಬಿಜೆಪಿಯವರು ಕೇಂದ್ರದಲ್ಲಿ ಇರುವ ಅವರದೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಬೇಕು. ಏಕೆಂದರೆ ಅವರಿಂದಲೇ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು. ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದರು.

About the Author

admin

Administrator

Visit Website View All Posts

Spread the love

Post navigation

Previous: 18 ಶಾಸಕರ ಅಮಾನತು ರದ್ದು ಮಾಡಲು ಬಿವೈವಿ ಆಗ್ರಹ
Next: ಬಿಜೆಪಿಯವರ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ್

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.