Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿಯವರ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ್
  • Bangalore
  • Front news
  • Politics
  • State

ಬಿಜೆಪಿಯವರ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ್

admin April 28, 2025 1 minute read
Spread the love

ಬೆಳಗಾವಿ: ಬಿಜೆಪಿಯವರ ಗೊಡ್ಡು ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ. ಇಂಥ ನೂರಾರು ಪ್ರತಿಭಟನೆ, ಬೆದರಿಕೆಗಳನ್ನು ನೋಡಿದ್ದೇವೆ. ಇಂಥ ಘಟನೆ ಬಿಜೆಪಿ ಯವರಿಗೆ ಶೋಭೆ ತರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಸಿಪಿಎಡ್ ಮೈದಾನದಲ್ಲಿ ಇಂದು (ಸೋಮವಾರ ಏ. 28) ರಂದು ನಡೆದ ಕೇಂದ್ರ ಸರ್ಕಾರ ವಿರುದ್ಧದ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಬಟ್ಟೆ ಪ್ರದರ್ಶಿಸಿದ ಬಗ್ಗೆ ಕಿಡಿ ಕಾರಿದ ಸಚಿವರು, ನಾಡಿನ ಮುಖ್ಯಮಂತ್ರಿಗಳಿಗೆ ಬಿಜೆಪಿಗರು ಅಗೌರವ ತೋರಿದ್ದಾರೆ. ಇದು ಬಿಜೆಪಿಯವರ ಹತಾಶ ಮನೋಭಾವವನ್ನು ತೋರುತ್ತದೆ ಎಂದರು.

ಬಿಜೆಪಿಯವರಿಗೆ ಧೈರ್ಯವಿದ್ದರೆ ಎದುರಿಗೆ ಬಂದು ಪ್ರತಿಭಟಿಸಬಹುದಿತ್ತು. ಆ ಧೈರ್ಯ ಅವರಿಗಿಲ್ಲ. ಬೆಲೆ ಏರಿಕೆ ಯಾರಿಂದ ಆಗಿದೆ ಅನ್ನೋದು ಜನರಿಗೂ ಗೊತ್ತು. ಇಂಥ ಸಮಾರಂಭದಲ್ಲಿ ಹೀಗೆ ಮಾಡುವುದು ಸರಿಯಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು.‌

ನಮಗೂ ಪ್ರತಿಭಟಿಸಲು ಬರುತ್ತದೆ. ಬಿಜೆಪಿಯವರು‌ ಆಯೋಜಿಸುವ ಸಮಾರಂಭಗಳಲ್ಲಿ ಪ್ರತಿಭಟನೆ, ಗಲಾಟೆ ಮಾಡಬಹುದು.  ಬೀದಿ ಬೀದಿಗಳಲ್ಲಿ ಪ್ರತಿಭಟಿಸಬಹುದು. ನಮಗೂ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳಿದ್ದಾರೆ ಎಂದು ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: “ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿಸಿಎಂ
Next: ಬಸವೇಶ್ವರ ಪುತ್ಥಳಿ ಸ್ಥಾಪನೆ ಜಾತಿ ನಂಜು

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.