ದೆಹಲಿ: ಕಾಶ್ಮೀರದಲ್ಲಿ ಉಗ್ರರು ದಾಳಿ ಮಾಡಿರುವುದರಿಂದ ಭಾರತ ಸರ್ಕಾರವು ಮಹಾತ್ವದ ನಿರ್ದಾರವನ್ನು ತೆಗೆದುಕೊಂಡಿದ್ದು, ಪಾಕಿಸ್ತಾನದ ಸೊಕ್ಕಡಗಿಸಲು ಪ್ರಧಾನಿ ನರೇಂದ್ರ ಮೋದಿ ಒಂದೊಂದೇ ಮಹತ್ವದ ಹೆಜ್ಜೆಯನ್ನು ಇಡುತ್ತಿದ್ದಾರೆ.
ಹೌದು, ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳಿಗೆ ‘ಸಂಪೂರ್ಣ ಸ್ವಾತಂತ್ರ್ಯ’ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು (ಮಂಗಳವಾರ ಏ. 29) ರಂದು ದೆಹಲಿಯ ಪ್ರಧಾನಿ ಮೋದಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಪ್ರಧಾನಿಯವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು ತಮ್ಮ ನಿರ್ಧಾರ ಘೋಷಿಸಿದ್ದಾರೆ.
