ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಅಕ್ಷಯ ತೃತೀಯೆಂದು ಆಸ್ತಿದಾರ ಮಾಲೀಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ತೆರಿಗೆ ಪಾವತಿಗೆ ಕೇವಲ ಏಪ್ರಿಲ್ 30ರವರೆಗೆ ಮಾತ್ರ ಶೇ.5 ರಿಯಾಯಿತಿ ಜೊತೆ ಕಾಲಾವಕಾಶ ನೀಡಲಾಗಿತ್ತು. ಮತ್ತೆ ಇದೀಗ ಮೇ 30ರವರೆಗೆ ಶೇ.5 ರಿಯಾಯಿತಿಯ ಜೊತೆಗೆ ಕಾಲಾವಕಾಶವನ್ನು ವಿಸ್ತರಣೆ ಮಾಡಿದ್ದು ಇದರಿಂದ ಆಸ್ತಿ ತೆರಿಗೆ ಪಾವತಿದಾರರು ನಿಟ್ಟುಸಿರು ಬಿಡುವಂತಾಗಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಏಪ್ರಿಲ್ 30ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿತ್ತು.
ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿದೆ. ಹಾಗಾಗಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ. ಇದನ್ನೂ ಓದಿ: Digital media ಗೆ ಶಕ್ತಿ ತುಂಬಿದ CM ಸಿದ್ದರಾಮಯ್ಯ
2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿ ತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿದೆ. ಆ ಮೂಲಕ ಆದೇಶ ನೀಡಿ ಅಧಿಸೂಚನ ಹೊರಡಿಸಲಾಗಿದೆ.

