ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಅವರು ಒಂದಲ್ಲ ಒಂದು ತಂಟೆ ತಕರಾರುಗಳ ಮೂಲಕ ಸುದ್ದಿ ಆಗುತ್ತದೆ ಇದ್ದರು. ಇನ್ನು ಜನವರಿ (25/01/2025) ತಿಂಗಳಲ್ಲಿ ಯಾವುದೋ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಕೋಡಿಹಳ್ಳಿಯ ಜನರೊಂದಿಗೆ ತಂಟೆ ತಕರಾರು ಮಾಡಿರುವುದಕ್ಕೆ ಲಾಯರ್ ಜಗದೀಶ್ ಅವರನ್ನು ಬಂಧನಕ್ಕೆ ಒಳಪಡಿಸಲಾಗಿದ್ದು, 93 ದಿನಗಳ ನಂತರ ಇದೀಗ ಲಾಯರ್ ಜಗದೀಶ್ ಅವರು ಜಾಮೀನು ಮೇಲೆ ಹೊರ ಬಂದಿದ್ದಾರೆ. ಹೊರ ಬಂದ ಕೂಡಲೇ ರಾಜ್ಯ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಕೆಂಡಮಂಡಲವಾಗಿದ್ದಾರೆ.
ಇನ್ನು ಜಾಮೀನು ಮೇಲೆ ಹೊರಬಂದಿರುವ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, ತಮ್ಮ ಬಂಧನಕ್ಕೆ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯನ್ನು ನೇರ ಹೊಣೆ ಮಾಡಿದ್ದಾರೆ.
ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ, ನಾನು, PSI ಹಗರಣವನ್ನು ಬಯಲು ಮಾಡಿದ್ದು, ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ ಟೀಂ, ದೊಡ್ಡ ರಾಜಕಾರಣಿಗಳ ಸೆಕ್ಸ್ ಸ್ಕ್ಯಾಂಡನ್ನು ಬಹಿರಂಗಪಡಿಸಿದ್ದು, ರವಿ ಚೆನ್ನಣ್ಣನವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದು, ಟ್ರಾಫಿಕ್ ಟೋವಿಂಗ್ ಸಿಸ್ಟಂ ಅನ್ನು ನಿಲ್ಲಿಸಿದ್ದು, ಕೊಡಿಗೇಹಳ್ಳಿ ಸುತ್ತಮುತ್ತ ಡ್ರಗ್ಸ್ ವಿರುದ್ಧ ಹೋರಾಟ ನಡೆಸಿದ್ಧು, ಇವೆಲ್ಲವೂ ನನ್ನ ಹೋರಾಟದ ಭಾಗ ಎಂದಿದ್ದಾರೆ ಜಗದೀಶ್. ಇದನ್ನೂ ಓದಿ: ಲಾಯರ್ ಜಗದೀಶ್ ಅರೆಸ್ಟ್
ಈ ಧೈರ್ಯದ ಹೋರಾಟವನ್ನು ಸಹಿಸದ ಭ್ರಷ್ಟ ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆ, ನನ್ನ ಮತ್ತು ನನ್ನ ಮಗನ ವಿರುದ್ಧ ಸಂಚು ರೂಪಿಸಿ, 25/01/2025 ರಂದು ಸ್ಥಳಿಯ ಪುಂಡರಿಂದ ನನಗೆ ಮಾರಣಾಂತಿಕ ಹಲ್ಲೆ ನಡೆಸಿ, ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿತ್ತು. ಇವತ್ತಿಗೆ 93 ದಿನಗಳ ನಂತರ ನನಗೆ ನ್ಯಾಯ ಸಿಕ್ಕಿದೆ. ಜಾಮೀನು ಲಭಿಸಿದೆ. ನ್ಯಾಯಕ್ಕಾಗಿ ನನ್ನ ಹೋರಾಟ ಇನ್ನೂ ಜೀವಂತವಿದೆ, ನಾನು ಶರಣಾಗುವುದಿಲ್ಲ ಎಂದಿದ್ದಾರೆ ಜಗದೀಶ್.
