ಬೆಂಗಳೂರು: ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ಬಹಳ ಮಹತ್ವದ ಘಟ್ಟವಾಗಿರುತ್ತದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದರೆ ತಮ್ಮ ಮುಂದಿನ ಜೀವನಕ್ಕೆ ಸಹಾಯವಾಗುತ್ತದೆ ಎಂದು ಎಲ್ಲಾ ವಿದ್ಯಾರ್ಥಿಗಳು ಕಷ್ಟಪಟ್ಟು ಓದುತ್ತಾರೆ.
ಇನ್ನು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದರೆ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ ಎಂಬುವ ಕಾರಣಕ್ಕೆ ವಿದ್ಯಾರ್ಥಿಗಳು ಕಷ್ಟ ಪಟ್ಟು ತಮ್ಮ ಫಲಿತಾಂಶವನ್ನು ಹೆಚ್ಚಾಗಿ ಪಡೆದುಕೊಳ್ಳುತ್ತಾರೆ.
ಅದರಂತೆ ಇಂದು (ಬುಧವಾರ ಏ. 30) ರಂದು ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಗ್ಸಾಮಿನೇಷನ್ (CISCE) ಐಸಿಎಸ್ಇ ಮತ್ತು 10ನೇ ಮತ್ತು ಐಎಸ್ಸಿ 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಇಂದು ಪ್ರಕಟಿಸಿದೆ. ಸದ್ಯ ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಟಾಪರ್ಗಳ ಹೆಸರನ್ನು ಪ್ರಕಟಿಸಲಿದೆ.
12ನೇ ತರಗತಿಯ ಐಎಸ್ಸಿ ಪರೀಕ್ಷೆಗಳು ಫೆಬ್ರವರಿ 13 ರಿಂದ ಏಪ್ರಿಲ್ 5 ರವರೆಗೆ ನಡೆದರೆ, 10ನೇ ತರಗತಿಯ ಐಸಿಎಸ್ಇ ಪರೀಕ್ಷೆಗಳು ಫೆಬ್ರವರಿ 18 ರಿಂದ ಮಾರ್ಚ್ 27 ರವರೆಗೆ ನಡೆದಿದ್ದವು. ಈ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ 33% ಮತ್ತು ಪ್ರತಿ ವಿಷಯದಲ್ಲಿ ಕನಿಷ್ಠ 35% ಅಂಕಗಳನ್ನು ಗಳಿಸಬೇಕು. ಮರುಪರಿಶೀಲನಾ ಫಲಿತಾಂಶಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ಮೇ 4 ರ ನಂತರ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
