ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 2023ನೇ ಸಾಲಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಘೋಷಿಸಿದ್ದು, ಇದರಲ್ಲಿ ಮಹತ್ವಪೂರ್ಣ ಗ್ಯಾರೆಂಟಿಯಾದ ಗೃಹಲಕ್ಷ್ಮಿ ಯೋಜನೆ ಒಂದಾಗಿದೆ.
ಹೌದು, ಕಾಂಗ್ರೆಸ್ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ 2023ನೇ ಸಾಲಿನಲ್ಲಿ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದ್ದು, ಐದು ಗ್ಯಾರಂಟಿಗಳು ಇದೀಗ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲವೆಂದು ಆರೋಪ ಕೇಳಿ ಬರುತ್ತಿರುವ ಬೆನ್ನಲ್ಲೇ ಇದೀಗ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಸಿಹಿಸುತಿಯೊಂದು ಹೊರಬಿತ್ತಿದೆ.
ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ವರ್ಗಾವಣೆಯಾಗಿಲ್ಲ ಆದ್ದರಿಂದ ಮೂರು ತಿಂಗಳ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: KSRTC ಬಸ್ ನಲ್ಲೇ ನಮಾಜ್ ಮಾಡಿದ ಚಾಲಕ; ವಿಡಿಯೊ ವೈರಲ್ ತನಿಖೆಗೆ ಆದೇಶ
ರಾಜ್ಯದ ಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ. ಮೇ ತಿಂಗಳಲ್ಲಿ ಮೂರು ಕಂತಿನ ಹಣ ಬಿಡುಗಡೆಗೆ ಮಾಡೋದಾಗಿ ಸಚಿವೆ ಹೆಬ್ಬಾಳ್ಕರ್ ಹೇಳಿದ್ದಾರೆ. ಬಾಕಿ ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮೋದನೆ ಸಿಕ್ಕಿದೆ. ಹಾಗಾಗಿ ಮೇ ತಿಂಗಳಲ್ಲಿ ಮೊದಲು ಮೂರು ವಾರಗಳಲ್ಲಿ ಹಣ ಬಿಡುಗಡೆ ಮಾಡುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
