ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿಇಂದು 10ನೇ ತರಗತಿಯ ಪರೀಕ್ಷಾ ಫಲಿತಾಂಶ ಹೊರ ಬಿದ್ದಿದ್ದು 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಹೌದು, ಕರ್ನಾಟಕ ರಾಜ್ಯದಲ್ಲಿ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಹೊರ ಬಿದ್ದಿದ್ದು ರಾಜ್ಯದಲ್ಲಿ ಒಟ್ಟು 22 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದು ಕರ್ನಾಟಕ ರಾಜ್ಯದ ಹೆಗ್ಗಳಿಕೆಯನ್ನು ಹೆಚ್ಚಿಸಿದ್ದಾರೆ.
ಇನ್ನು SSLC ಫಲಿತಾಂಶ 2025 ಕರ್ನಾಟಕವನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ(karresults.nic.in) ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಶೇ.66.14ರಷ್ಟು ಫಲಿತಾಂಶ ಬಂದಿದೆ. ಇಂದಿನಿಂದಲೇ ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಇಂದು SSLC ಫಲಿತಾಂಶ ಪ್ರಕಟ
ಇಂದಿನಿಂದ ಮೇ-7 ರವರೆಗೆ ಸ್ಕ್ಯಾನ್ ಪ್ರತಿ ಪಡೆಯಲು ಅವಕಾಶ ಇರಲಿದೆ. ಮೇ 4 ರಿಂದ 11ನೇ ತಾರೀಖಿನವರೆಗೂ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇರಲಿದೆ. SSLC ಪರೀಕ್ಷೆ-2 ಮೇ26ರಿಂದ ಜೂನ್ 2ರವರೆಗೆ ನಡೆಯಲಿದೆ. SSLC ಪರೀಕ್ಷೆ-3 ಜೂನ್ 23-ಜೂನ್ 30 ನಡೆಯಲಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ.91.12 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಗಳಿಸಿದೆ.
ಉಡುಪಿಯು ಶೇ.89.96 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದರೆ ಉತ್ತರ ಕನ್ನಡ ಜಿಲ್ಲೆ ಶೇ.83.19 ರಷ್ಟು ಫಲಿತಾಂಶಗಳೊಂದಿಗೆ ತೃತೀಯ ಸ್ಥಾನ ಗಳಿಸಿದೆ.
