ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಐಪಿಎಲ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದ್ದು ಈ ಪಂದ್ಯಾಗೆ ಮಳೆ ಅಡ್ಡಿಯಾಗುತ್ತದೆ ಎಂದು ಕ್ರಿಕೆಟ್ ಅಭಿಮಾನಿಗಳು ಚಿಂತನೆಗೆ ಒಳಗಾಗಿದ್ದಾರೆ.
ಹೌದು, ಇಂದು ನಡೆಯಲಿರುವ ಐಪಿಎಲ್ ಪಂದ್ಯಾವಳಿಗಳಿಗೆ ಮಳೆರಾಯ ಅಧಿಪಡಿಸುತ್ತಾನೆ ಎಂಬ ಚಿಂತೆ ಇದೀಗ ಎಲ್ಲಾ ಐಪಿಎಲ್ ಅಭಿಮಾನಿಗಳಲ್ಲಿ ಕಾಡುತ್ತಿದೆ. ನಿನ್ನೆ (ಶುಕ್ರವಾರ ಮೇ 03) ರಂದು ನಗರದಲ್ಲಿ ಮಳೆಯಾಗಿದ್ದು, ಇಂದು ಕೂಡ ಮಳೆಯಾಗಬಹುದು ಎಂಬುವ ನಿರೀಕ್ಷೆಇರುವುದರಿಂದ ಇಂದು ನಡೆಯಲಿರುವ ಐಪಿಎಲ್ ಪಂದ್ಯಗೆ ಮಳೆರಾಯ ಅಡಿಪಡಿಸುತ್ತಾನೆ ಎಂಬುದೇ ಐಪಿಎಲ್ ಅಭಿಮಾನಿಗಳ ಯೋಚನೆಯಾಗಿದೆ. ಇದನ್ನೂ ಓದಿ: ಇಂದು RCB vs CSK ಹೈವೋಲ್ಟೇಜ್ ಮ್ಯಾಚ್
ಶುಕ್ರವಾರ ಸಂಜೆ ಆಗುತ್ತಿದ್ದಂತೆ ಕೋರಮಂಗಲ, ಡೈರಿ ವೃತ್ತ, ಲಾಲ್ ಬಾಗ್, ಯಲಹಂಕ, ಬೆಳ್ಳಂದೂರು, ಮೆಜೆಸ್ಟಿಕ್, ವಿದ್ಯಾರಣ್ಯಪುರ, ಸೇರಿದಂತೆ ಅನೇಕ ಕಡೆಗಳಲ್ಲಿ ಮಳೆ ದಾಖಲಾಗಿದೆ. ಅದರಂತೆ ಇಂದು ಕೂಡ ಭಾರೀ ಮಳೆ ಆಗಲಿದೆ. ಹೀಗಾಗಿ ಇಂದು ಬೆಂಗಳೂರು vs ಚೆನ್ನೈ ಪಂದ್ಯಕ್ಕೂ ಮಳೆ ಎದುರಾಗುವ ಸಾಧ್ಯತೆ ಇದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಪಂದ್ಯ ನಡೆಯಲಿದ್ದು, ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿ ಆಗುವ ಸಾಧ್ಯತೆ ಇದೆ. ಶುಕ್ರವಾರದ ಅಭ್ಯಾಸದ ಶಿಬಿರಕ್ಕೂ ಮಳೆ ಅಡ್ಡಿಪಡಿಸಿತ್ತು. ಶನಿವಾರ ಕೂಡ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.
