ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಶಾಂತಿನಗರ ಗ್ರಾಮದ ಬಳಿ KSRTC ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ಜನ ಸ್ಥಳದಲ್ಲೇ ಸಾವನ್ನುಪ್ಪಿದ್ದು ಇನ್ನೂ ಮೂರು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ
ಮೃತರನ್ನು ಶಾಂತಿನಗರ ಗ್ರಾಮದ ಶ್ರೀನಿವಾಸ್, ಪುಟ್ಟಮ್ಮ ವರ್ಷಿಣಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಲೇಖನ ಎಂಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ನಾಗರತ್ನಮ್ಮ ಹಾಗೂ ವೆಂಕಟೇಶ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಶವಗಾರಕ್ಕೆ ರವಾನೆ ಮಾಡಿದ್ದಾರೆ.
