ಬೆಂಗಳೂರು: ಕನ್ನಡ ಚಿತ್ರರಂಗದ ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ ಎಂದು ತಿಳಿದುಬಂದಿದೆ.
ಹೌದು, ನಟ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ನಗರದ ಖಾಸಗಿ ಆಸ್ಪತ್ರೆಯಾದ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಓವರ್ ಅಸಿಡಿಟಿಯಿಂದ ಬಳಲುತ್ತಿದ್ದ ಅವರನ್ನು ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಒಟಿಟಿಗೆ ಲಗ್ಗೆ ಇಡಲು ʼವಿದ್ಯಾಪತಿʼ ಎಂಟ್ರಿ
ಇನ್ನು ಈ ಹಿಂದೆ ಅವರು ನಟಿಸಿದ್ದ ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಇದೇ ರೀತಿ ಆಗಿತ್ತು. ಸದ್ಯಕ್ಕೆ ಉಪೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲ ಅಂತಾ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
