ಬೆಂಗಳೂರು ಇಂದು (ಬುಧವಾರ 13.05.2025) ರಂದು, ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಅಧ್ಯಕ್ಷರಾದ ಜಿ.ಕೃಷ್ಣಪ್ಪ ರವರು ಶಾಂತಿನಗರ ವಿಧಾನ ಸಭಾ ಕ್ಷೇತ್ರದ ಕಛೇರಿಯಲ್ಲಿ ಪರಿವೀಕ್ಷಣೆ ಕಾರ್ಯಕ್ರಮವನ್ನು ಕೈಗೊಂಡು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಚರ್ಚಿಸಿದರು. ಗ್ಯಾರಂಟಿ ಮನೆ-ಮನೆ ಭೇಟಿ ಕಾರ್ಯಕ್ರಮದ ಮಹತ್ವದ ಬಗ್ಗೆ ಸಮಿತಿ ಸದಸ್ಯರಿಗೆ ವಿವರಿಸಿದರು.
ಮನೆ ಮನೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಸಾರ್ವಜನಿಕರ ಸಮಸ್ಯೆಗಳು ನಮ್ಮ ಗಮನಕ್ಕೆ ಬರುತ್ತದೆ ಹಾಗೂ ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ಒದಗಿಸಲು ಅನುಕೂಲವಾಗುತ್ತದೆ. ಸರ್ಕಾರಕ್ಕೂ ಒಳ್ಳೆಯ ಹೆಸರು ಬರುತ್ತದೆ ಮುಂದುವರೆದು ಅನ್ನಭಾಗ್ಯ ಪಡಿತರ ವಿತರಿಸುವಾಗ ತೂಕದಲ್ಲಿ ವ್ಯತ್ಯಾಸ ವಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸುವಂತೆ ಆಹಾರ ನಿರೀಕ್ಷಕರಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಶಾಂತಿನಗರ ವಿಧಾನ ಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಂಜು ವಿ ರವರು, ಸ್ಥಳೀಯ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಉಮೇಶ್, ಸ್ಥಳೀಯ ಸಮಿತಿಯ ಸದಸ್ಯರುಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು ಭಾಗವಹಿಸಿದ್ದರು.
