ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿಯಾಗಿದ್ದ ಚೈತ್ರಾ ಕುಂದಾಪುರವರು ಇತ್ತೀಚಿಗಷ್ಟೇ ಮದುವೆಯಾಗಿದ್ದು ಇದೀಗ ಅವರ ತಂದೆಯವರು ಅವರ ಮದುವೆ ಬಗ್ಗೆ ಆಕ್ಷೇಪ ಹೊರ ಹಾಕಿದ್ದಾರೆ.
ಹೌದು, ಕನ್ನಡ ಬಿಗ್ ಬಾಸ್ ಸೀಸನ್ 11 ರಿಂದ ಖ್ಯಾತಿಯನ್ನು ಪಡೆದ ಚೈತ್ರಾ ಕುಂದಾಪುರವರು ಇತ್ತೀಚಿಗಷ್ಟೇ ಮದುವೆಯಾಗಿದ್ದು ಅವರ ಮದುವೆ ಬಗ್ಗೆ ಅವರ ತಂದೆಯೇ ಆಕ್ಷೇಪ ಹೊರ ಹಾಕಿರುವುದು ಇದೀಗ ಎಲ್ಲರಲ್ಲೂ ಬಹುದೊಡ್ಡ ಪ್ರಶ್ನೆಯಾಗಿದೆ.
ಚೈತ್ರಾ ಮದುವೆ ಬಗ್ಗೆ ತಂದೆ ಮಾತನಾಡಿ, ಚೈತ್ರಾ ಮತ್ತು ಅವರ ಪತಿ ಇಬ್ಬರೂ ಕೂಡ ಕಳ್ಳರು ಅವರನ್ನು ಯಾರೂ ಕೂಡ ಗೌರವದಿಂದ ಕಾಣಬೇಡಿ ಅವರು ಹಣದಾಸೆಗೆ ಏನು ಬೇಕಾದರೂ ಮಾಡಲು ತಯಾರಿದ್ದಾರೆ ಎಂದು ಹೇಳಿದ್ದಾರೆ.
ನನ್ನ ಪತ್ನಿ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ ಎಂದರು. ಉದ್ಯಮಿ ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಹೆಮ್ಮೆಯ ವಿಷಯವಾಗುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ. ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೀಗ ಹಾಕಿ ಬಿಗ್ ಬಾಸ್‌ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ನಾನೇ ಅನಾಥನಾಗಿದ್ದೇನೆ ಎಂದು ನೊಂದು ನುಡಿದಿದ್ದಾರೆ.
ಚೈತ್ರ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ. ಚೈತ್ರಾ ಪತಿ ನಮ್ಮ ಮನೆಯಲ್ಲಿ ಇದ್ದವ, ಅವನು ಕೂಡ ಕಳ್ಳ. ನನ್ನ ಕುಟುಂಬದ ಮಾನ ಮರ್ಯಾದೆ ತೆಗೆದಿದ್ದಾರೆ. ನಾನು ಸತ್ಯ, ನ್ಯಾಯ, ಧರ್ಮದಲ್ಲಿರುವ ವ್ಯಕ್ತಿ. ನನ್ನ ದೊಡ್ಡ ಮಗಳು ಟೀಚರ್ ಆಗಿ, ಹೊಲಿಗೆ ಮಾಡಿಕೊಂಡು ಗೌರವಾನ್ವಿತ ರೀತಿಯಲ್ಲಿ ಬದುಕುತ್ತಿದ್ದಾಳೆ. ನನ್ನ ದೊಡ್ಡ ಮಗಳ ಮೇಲು ಚೈತ್ರ ಸುಳ್ಳು ಅಪವಾದ ಹಾಕಿದ್ದಳು ಎಂದು ಬೇಸರಿಸಿದ್ದಾರೆ. ಇದನ್ನೂ ಓದಿ: ಮತ್ತೆ ಸದ್ದು ಮಾಡಲು ಸಜ್ಜಾದ ನೀಲಿ ಕಂಗಳ ಚೆಲುವೆ!
ಬಿಗ್ ಬಾಸ್ ವೇದಿಕೆಯಲ್ಲಿ ಎಲ್ಲಾ ಸತ್ಯ ಒಪ್ಪಿಕೊಳ್ಳಬಹುದಾಗಿತ್ತು. ನಾನೇ ಮನೆ ನಡೆಸುವವಳು ಎಂದು ಬಿಂಬಿಸಿಕೊಂಡಿದ್ದಾಳೆ. ಬೇರೆ ಬೇರೆ ಬ್ಯಾಂಕುಗಳಲ್ಲಿ ಡೆಪಾಸಿಟ್ ಇಟ್ಟಿದ್ದಳು. ಪಡ್ಡೆ ಹುಡುಗರ ಹೆಸರಿನಲ್ಲೆಲ್ಲ ಡೆಪಾಸಿಟ್ ಮಾಡಿ ಬಾಂಡ್ ಮೇಲೆ ಸಾಲ ಪಡೆದಿದ್ದಳು. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡುತ್ತಾಳೆ? ನನ್ನ ಹೆಂಡತಿಗೂ ಹಣ ಕೊಟ್ಟಿದ್ದಾಳೆ, ಅವಳಿಗೆ ಗಂಡ ಬೇಡ ಎಂದಿದ್ದಾರೆ.
