Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ರೈಲ್ವೆ ಸಚಿವರು
  • Bangalore
  • Front news
  • Politics
  • State

ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ರೈಲ್ವೆ ಸಚಿವರು

admin May 15, 2025 1 minute read
Spread the love

ಕೊಪ್ಪಳ: ಕೇಂದ್ರ ಸಚಿವ ವಿ ಸೋಮಣ್ಣ ಅವರು ಸಚಿವರಾದ ಮೇಲೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ರೈಲು ಮಾರ್ಗ ಸೇರಿದಂತೆ ರೈಲು ನಿಲ್ದಾಣ ಹಾಗೂ ಇನ್ನಿತರ  ಕಾರ್ಯಕ್ರಮಗಳನ್ನು ನೆರವೇರಿಸುತ್ತಿದ್ದು, ಇಂದು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ರೈಲು ನಿಲ್ದಾಣಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಹೌದು, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಇಂದು (ಗುರುವಾರ ಮೇ 15) ರಂದು ವಿವಿಧ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕುಷ್ಟಗಿ ರೈಲು ನಿಲ್ದಾಣ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನ ರೈಲು ನಿಲ್ದಾಣದಲ್ಲಿ ಮಹತ್ವದ ಕಾರ್ಯಕ್ರಮ ಜರುಗಲಿವೆ. ಈ ರೈಲ್ವೆ ಯೋಜನೆಗಳಿಂದ ಗದಗ, ಹುಬ್ಬಳ್ಳಿ, ಧಾರವಾಡ, ರಾಚಯೂರು, ಕೊಪ್ಪಳ, ಸಿಂಧನೂರು ಭಾಗದ ಜನರಿಗೆ ಅನುಕೂಲವಾಗಲಿದೆ.

ಇನ್ನು ಕುಷ್ಟಗಿ ರೈಲು ನಿಲ್ದಾಣದಲ್ಲಿಂದು ಗದಗ-ವಾಡಿ ನೂತನ ರೈಲು ಮಾರ್ಗದ ತಳಕಲ್-ಕುಷ್ಟಗಿ ಭಾಗದ ಉದ್ಘಾಟನೆ ನೆರವೇರಿಸಿ, ಕುಷ್ಟಗಿ-ಎಸ್‌ಎಸ್‌ಎಸ್‌ ಹುಬ್ಬಳ್ಳಿ ಪ್ಯಾಸೆಂಜರ್‌ ರೈಲಿಗೆ ಚಾಲನೆ ನೀಡಿದರು. ಇದನ್ನೂ ಓದಿ: ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಈ ಸಂದರ್ಭದಲ್ಲಿ, ಹಿಂದುಳಿದ ವರ್ಗಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.‌ ತಂಗಡಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಶಾಸಕರಾದ  ಬಸವರಾಜ ರಾಯರೆಡ್ಡಿ, ಕುಷ್ಟಗಿ ಶಾಸಕರಾದ  ದೊಡ್ಡನಗೌಡ ಎಚ್.‌ ಪಾಟೀಲ್‌ ಅವರು, ಕೊಪ್ಪಳ ಜಿಲ್ಲಾಧಿಕಾರಿಗಳಾದ  ನಳಿನ್‌ ಅತುಲ್‌, ವಿಧಾನ ಪರಿಷತ್‌ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ ಅವರು, ಮಾಜಿ ಸಚಿವರಾದ ಹಾಲಪ್ಪ ಆಚಾರ್‌ ಅವರು, ಮಾಜಿ ಸಂಸದರಾದ  ವಿರುಪಾಕ್ಷಪ್ಪ ಅವರು, ಮಾಜಿ ಶಾಸಕರಾದ  ಬಸವರಾಜ ದಡೇಸುಗೂರು,  ಅಮರೇಗೌಡ ಪಾಟೀಲ್‌ ಬಯ್ಯಾಪುರ,  ಪ್ರತಾಪ್‌ ಗೌಡ ಪಾಟೀಲ್‌ ಅವರು ಹಾಗೂ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರ ಅವರ ಮೇಲೆ ದೊಡ್ಡ ಆರೋಪ ಮಾಡಿದ್ಯಾಕೆ?
Next: ವೀರಸೇನಾನಿಗಳಿಗೆ ಕೃತಜ್ಞತೆ ಸಲ್ಲಿಸಿದ ತಿರಂಗ ಯಾತ್ರೆ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.