Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಾಯಿ ಲೇಔಟ್ ಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಮಹೇಶ್ವರ್ ರಾವ್
  • Bangalore
  • Front news
  • State

ಸಾಯಿ ಲೇಔಟ್ ಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಮಹೇಶ್ವರ್ ರಾವ್

admin May 18, 2025
Spread the love

ಬೆಂಗಳೂರು: ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಸಾಯಿ ಲೇಔಟ್ ಜಲಾವೃತವಾಗುವುದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದರು.

ನಗರದಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಸಮಸ್ಯೆಯಾಗಿರುವ ಪ್ರದೇಶಗಳಿಗೆ ಭೇಟಿ ನಿಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಗರದಲ್ಲಿ ಜೋರು ಮಳೆಯಾಗಿದ್ದು, ಅಧಿಕಾರಿಗಳೆಲ್ಲಾ ರಾತ್ರಿ 1 ಗಂಟೆಯವರೆಗೆ ಫೀಲ್ಡ್ ನಲ್ಲೇ ಇದ್ದು, ಮೇಲ್ವಿಚಾರಣೆ ಮಾಡಿ ಇರುವ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ತಿಳಿಸಿದರು.

ಸಾಯಿ ಲೇಔಟ್ ಪ್ರದೇಶವನ್ನು ಬಿ.ಡಿ.ಎ. ಅಭಿವೃದ್ಧಿಪಡಿಸಿದ್ದು, ಬಿ.ಡಿ.ಎ ಅಧಿಕಾರಿಗಳ ಜೊತೆ ಸಭೆ ನಡೆಸಿ ಇರುವ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬಿ.ಡಿ.ಎ ವತಿಯಿಂದ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ಜಾಕ್ ವೆಲ್ ವ್ಯವಸ್ಥೆ ಮಾಡಿ ಪಂಪ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಟ್ರ್ಯಾಕ್ಟರ್ ಮೂಲಕ ಸಾಯಿ ಲೇಔಟ್ ವೀಕ್ಷಣೆ:

ಸಾಯಿ ಲೇಔಟ್ ನಲ್ಲಿ ಜಲಾವೃತ ಆಗಿರುವ ಪ್ರದೇಶವನ್ನು ಟ್ರ್ಯಾಕ್ಟರ್ ಮೂಲಕ ಪರಿಶೀಲನೆ ನಡೆಸಿ, ಎಲ್ಲೆಲ್ಲಿ ನೀರು ನಿಂತಿದೆಯೋ ಅದನ್ನೆಲ್ಲಾ ಪಂಪ್ ಗಳ ಮೂಲಕ ತ್ವರಿತವಾಗಿ ನೀರು ಹೊರ ಹಾಕುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು‌.

ಮಾನ್ಯತಾ ಟೆಕ್ ಪಾರ್ಕ್ ಬಳಿ ಪರಿಶೀಲನೆ:

ಮಾನ್ಯತಾ ಟೆಕ್ ಬಳಿ ಬರುವ ಮಾನ್ಫೋ ಹತ್ತಿರ ರಾಜಕಾಲುವೆ ಸಂಪರ್ಕ ಸರಿಯಾಗಿಲ್ಲದ ಕಾರಣ ಜಲಾವೃತವಾಗುತ್ತದೆ. ಈ ಸಂಬಂಧ ಹೊಸದಾಗಿ ಮಳೆ ನೀರುಗಾಲುವೆ ನಿರ್ಮಾಣ ಮಾಡುವ ಸಲುವಾಗಿ ಮಾನ್ಯತಾ, ಇ.ಬಿ.ಸ್ ಐಟಿ ಪಾರ್ಕ್, ಮ್ಯಾನ್ಫೋ, ಕಾರ್ಲೆ ಇನ್ಫಾಟೆಕ್ ಜೊತೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾಗವಾರ ಜಂಕ್ಷನ್ ಬಳಿ ಪರಿಶೀಲನೆ:

ನಾಗವಾರ ಜಂಕ್ಷನ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಈ ಜಂಕ್ಷನ್ ನಲ್ಲಿ ಜಲಾವೃತವಾಗುವುದನ್ನು ತಪ್ಪಿಸಲು ಮಳೆ ನೀರುಗಾಳುವೆಯಲ್ಲಿ ನಿರಂತರವಾಗಿ ಸ್ವಚ್ಛತೆ ಕಾಪಾಡಲು ಮೆಟ್ರೋ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಹೈಡೆನ್ಸಿಟಿ ಕಾರಿಡಾರ್ ಕಾಮಗಾರಿ ಪ್ರಗತಿಯಲ್ಲಿದ್ದು, ಇದರಿಂದ ಕ್ರಾಸ್ ಕಲ್ವರ್ಟ್ ಕಾಮಗಾರಿ ಮಾಡಲು ಸೂಚಿಸಲಾಯಿತು.

ಇದೇ ವೇಳೆ ಥಣಿಸಂದ್ರದ ಬಳಿ ಮಳೆ ನೀರುಗಾಲುವೆಯಿಂದ ಹೂಳೆತ್ತಿದ್ದು, ಈಗಾಗಲೇ ಸುಮಾರು 20 ಲೋಡ್ ಹೂಳನ್ನು ತೆರವುಗೊಳಿಸಲಾಗಿದೆ. ಬಾಕಿಯಿರುವ ಹೂಳನ್ನು ಕೂಡಾ ತ್ವರಿತವಾಗಿ ತೆರವುಗೊಳಿಸಬೇಕು. ಮಳೆ ನೀರುಗಾಲುವೆ ಮೇಲೆ ಸ್ಲ್ಯಾಬ್ ಗಳನ್ನು ಅಳಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಪರಿಶೀಲನೆಯ ವೇಳೆ ಮಹದೇವಪುರ ವಲಯ ಆಯುಕ್ತರಾದ ರಮೇಶ್, ಯಲಹಂಕ ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿಮ್, ಕಾರ್ಯಪಾಕಲಕ ಅಭಿಯಂತರು, ಪಾಲಿಕೆ ಹಾಗೂ ಮೆಟ್ರೋ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ಶರಣ್‌ ಪ್ರಕಾಶ್‌ ಪಾಟೀಲ್
Next: ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯ ಪರಿಶೀಲನೆ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.