ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯದ ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಪ್ರದೇಶಗಳಿಗೆ ವಲಯ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಪರಿಶೀಲನೆ ನಡೆಸಿದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮಂಜುನಾಥ ನಗರ, ಇಂದಿರಾ ನಗರ ಕಾಲೋನಿಗೆ ಭೇಟಿ ನೀಡಿ ಮೊಬೈಲ್ ತಂತ್ರಾಂಶ ಮೂಲಕ ದತ್ತಾಂಶ ಸಂಗ್ರಹಣಾ ಕಾರ್ಯ ಮಾಡುತ್ತಿರುವುದನ್ನು ಖುದ್ದು ಪರಿಶೀಲಿಸಿ ತ್ವರಿತಗತಿಯಲ್ಲಿ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಕಂದಾಯ ಅಧಿಕಾರಿಯಾದ ಬಸವರಾಜ್ ರವರಿಗೆ ಸೂಚನೆ ನೀಡಿದರು.
ಈ ವೇಳೆ ಸಹಾಯಕ ಕಂದಾಯ ಅಧಿಕಾರಿ ಕೃಷ್ಣ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
