Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನನ್ನೆಲ್ಲಾ ಬೆಂಗಳೂರಿಗರೇ, ನಾನು ನಿಮ್ಮಲ್ಲಿ ಒಬ್ಬ: ಡಿಕೆಶಿ
  • Bangalore
  • Front news
  • Politics
  • State

ನನ್ನೆಲ್ಲಾ ಬೆಂಗಳೂರಿಗರೇ, ನಾನು ನಿಮ್ಮಲ್ಲಿ ಒಬ್ಬ: ಡಿಕೆಶಿ

admin May 19, 2025 1 minute read
Spread the love

ಬೆಂಗಳೂರು: ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು ನಗರ ಜಲಾವೃತಗೊಂಡಿದ್ದು ರಸ್ತೆಗಳೆಲ್ಲ ಕೆರೆಗಳಂತೆ ನೀರು ತುಂಬಿಕೊಂಡಿದ್ದು ಇದರಿಂದ ಜನರ ಜೀವನ ಅರ್ಥವ್ಯಸ್ತವಾಗಿದೆ.  ಭಾರೀ ಮಳೆಯಿಂದಾಗಿ ಮನೆಗೆ ನೀರು ನುಗ್ಗಿರುವುದರಿಂದ ಮನೆಯ ಸಾಮಾಗ್ರಿಗಳು ಹಾಳಾಗುವುದರ ಜೊತೆಗೆ ಸಿಸಿಬಿ ಕಚೇರಿಗೂ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ.

ಇನ್ನು ಭಾರಿ ಮಳೆಯಿಂದಾಗಿ ಪರಿ ತಪ್ಪಿಸುತ್ತಿರುವ ಜನರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿ, ನಿಮ್ಮೊಂದಿಗೆ ನಾನಿದ್ದೇನೆ ನಿಮ್ಮ ಜೊತೆ ನಾನು ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಳೆಯಿಂದಾಗಿ ಬಾರಿ ಅನಾಹುತವೇ ಸೃಷ್ಟಿಯಾಗಿದ್ದು ಈ ಕುರಿತು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳೇ ಜೊತೆ ಮಾತನಾಡಿ ತ್ವರಿತ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಸವಾಲುಗಳನ್ನು ಎದುರಿಸಲು ಮತ್ತು ಪರಿಹಾರವನ್ನು ಕೈಗೊಳ್ಳುವ ದಿನದ 24 ಗಂಟೆಗಳೂ ನಾನು ಕೆಲಸ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ನಾನು ಬಿಬಿಎಂಪಿ ವಾರ್ ರೂಮ್ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ವಾಸ್ತವಿಕವಾಗಿ ಮಾಹಿತಿ ಪಡೆಯುತ್ತೇನೆ. ಇವತ್ತು ನಾವು ಎದುರಿಸುತ್ತಿರುವ ಸಮಸ್ಯೆಗಳು ಹೊಸದೇನಲ್ಲ. ಹಲವು ಸರ್ಕಾರಗಳ, ಹಲವು ವರ್ಷಗಳ ನಿರ್ಲಕ್ಷತನ ಈ ಸಮಸ್ಯೆ ಎದುರಿಸುತ್ತಿದ್ದೇವೆ. ಈ ಸಮಸ್ಯೆಯನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದೇನೆ. ತಾತ್ಕಾಲಿಕ ಪರಿಹಾರ ಅಲ್ಲ, ದೀರ್ಘಕಾಲಿಕ ಪರಿಹಾರ ಕೈಗೊಳ್ಳು ಕೆಲಸ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಳೆರಾಯನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಮಂದಿ ಹೈರಾಣ, ಮುಳುಗಿದ ಸಿಸಿಬಿ ಕಚೇರಿ

ನನ್ನೆಲ್ಲಾ ಬೆಂಗಳೂರಿಗರೇ, ನಾನು ನಿಮ್ಮಲ್ಲಿ ಒಬ್ಬ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ. ನಿಮ್ಮ ಕಳವಳ ಅರ್ಥಮಾಡಿಕೊಳ್ತೇನೆ. ಹತಾಶೆಯನ್ನು ಹಂಚಿಕೊಳ್ಳುತ್ತೇನೆ. ಬೆಂಗಳೂರಿನ ಈ ಸಮಸ್ಯೆಯನ್ನು ಪರಿಹರಿಸಲು ನಾನು ಬದ್ಧನಾಗಿದ್ದು, ಈ ಬಗ್ಗೆ ನಾನು ಭರವಸೆ ನೀಡುತ್ತೇನೆ. ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಶಾಸಕರಿಂದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟನೆ
Next: ಭಾರಿ ಮಳೆ; ಆತಂಕ ಬೇಡ ಮುನ್ನೆಚ್ಚರಿಕೆಯ ಕ್ರಮವಹಿಸಿ: ಎಂ ಸತೀಶ್ ರೆಡ್ಡಿ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.