ಬೆಂಗಳೂರು: ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರು ನಗರವೇ ಅಲ್ಲೋಲಕಲ್ಲೋಲವೆ ಆಗಿದ್ದು ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿರುವ ವಿರೋಧ ಪಕ್ಷಗಳು ಇದೀಗ ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡುತ್ತಿದ್ದಾರೆ.
ಗ್ರೇಟರ್ ಬೆಂಗಳೂರು ಕನಸು ಕಾಣುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ನಿನ್ನೆ ಸುರಿದ ಭಾರಿ ಮಳೆ ತಕ್ಕ ಉತ್ತರ ನೀಡಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರಿ ಮಳೆಯಾದಾಗ ಗ್ರೇಟರ್ ಬೆಂಗಳೂರು ಮುಳುಗುತ್ತದೆ ಮತ್ತು ಲಘು ಮಳೆಯಾಗ ತೇಲುತ್ತದೆ ಎಂದು ಎಚ್ ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರವನ್ನ ಟೀಕಿಸಿದ್ದಾರೆ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನೆಲ್ಲಾ ಬೆಂಗಳೂರಿಗರೇ, ನಾನು ನಿಮ್ಮಲ್ಲಿ ಒಬ್ಬ: ಡಿಕೆಶಿ
ಮೂಲಸೌಕರ್ಯಗಳನ್ನು ಸರಿಪಡಿಸುವಲ್ಲಿ ಆಡಳಿತಾರೂಢ ಕಾಂಗ್ರೆಸ್ ವಿಫಲವಾಗಿದೆ ಎಂದು ಅವರು, ಗುಂಡಿಗಳು, ತೆರೆದ ಚರಂಡಿಗಳು ಮತ್ತು ಪದೇ ಪದೇ ಪ್ರವಾಹ ಉಂಟಾಗುವುದು ದುರಾಡಳಿತದ ಪುರಾವೆಯಾಗಿದೆ. ಮಳೆ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ಧವಾಗದೇ ಇರುವುದರ ಸೂಚಕವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
