ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಆರು ತಿಂಗಳುಗಳ ಕಾಲ ಜೈಲು ಸೆರೆವಾಸ ಅನುಭವಿಸಿ ಷರತ್ತುಬದ್ಧ ಜಾಮೀನು ಮೇಲೆ ಹೊರಬಂದಿರುವ ನಟ ದರ್ಶನ್ ಹಾಗೂ ಪವಿತ್ರ ಅವರು ಇಂದು ಮುಖಾಮುಖಿ ಯಾಗಿದ್ದಾರೆ.
ಇನ್ನು ರೇಣುಕಾ ಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಬಿಗ್ ರಿಲೀಸ್ ಸಿಕ್ಕಿದ್ದು, ಸದ್ಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 10 ಕ್ಕೆ ಮುಂದೂಡಿದೆ.
ಯೆಸ್…ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಪಟ್ಟಂತೆ ಬೆಂಗಳೂರಿನ 57ನೇ CCH ಕೋರ್ಟ್ ವಿಚಾರಣೆಯನ್ನು ಜುಲೈ 10 ಕ್ಕೆ ಮುಂದೂಡಲಾಗಿದೆ. ಎ1 ಪವಿತ್ರಗೌಡ, ಎ2 ದರ್ಶನ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜುಲೈ 10ಕ್ಕೆ ಎಲ್ಲರೂ ಹಾಜರಾಗುವಂತೆ ಕೋರ್ಟ್ ಸೂಚನೆ ಕೊಟ್ಟಿದೆ. ಇದನ್ನೂ ಓದಿ: ದರ್ಶನ್ ಗೆಟಪ್ಗೆ ಫ್ಯಾನ್ಸ್ ಫೀದಾ!
ಒಟ್ಟಿನಲ್ಲಿ ಅದೇನೆ ಆಗಲಿ ಕಾಟೇರನಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದ್ದು ದಾಸನ ಅಭಿಮಾನಿಗಳು ಫುಲ್ ಖುಷಿ ಆಗಿದ್ದಾರೆ.
