ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರವು ಬಿಬಿಎಂಪಿ ಗುತ್ತಿಗೆದಾರರಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವಾಗ ಕಾಮಗಾರಿಗಳಿಗೆ ಹಣ ಬಿಡುಗಡೆಗೆ ಬಿಬಿಎಂಪಿ ಆದೇಶ ಹೊರಡಿಸಿದೆ.
ಹೌದು, ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳ ಹಣ ಬಿಡುಗಡೆಗೆ ಬಿಬಿಎಂಪಿ ಆದೇಶ ಹೊರಡಿಸಿದೆ. ಡಿಸಿಎಂ ಡಿಕೆ ಶಿವಕುಮಾರ್ ರವರ ಸೂಚನೆ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತರು ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಕಾಮಗಾರಿಗಳ ಹಣ ಬಿಡುಗಡೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶಿಸಿದೆ.
2025-26ನೇ ಸಾಲಿನ 1ನೇ ಕಂತಿನ ಮೊತ್ತ 750 ಕೋಟಿ ರೂ. ಬಿಡುಗಡೆಗೆ ಆದೇಶ ಹೊರಡಿಸಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತರ ಕೋರಿಕೆಯ ಡಿಸಿಎಂ ಗುತ್ತಿಗೆದಾರರಿಗೆ ಬಿಡುಗಡೆಗೊಳಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆ ಹಣ ಬಿಡುಗಡೆಗೆ ಆದೇಶಿಸಲಾಗಿದೆ. ಈ ಬಗ್ಗೆ ಮುಖ್ಯ ಆಯುಕ್ತರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಅವಧಿ ವಿಸ್ತರಣೆ
