ಬೆಂಗಳೂರು: 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲ ಮಗಳು ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ಗೆ gold ಕೇಸ್ ನಲ್ಲಿ ಈಗಾಗಲೇ ಜೈಲು ಸೆರೆವಾಸ ಅನುಭವಿಸುತ್ತಿರುವ ಅವರಿಗೆ ಇದೀಗ ಆರ್ಥಿಕ ವ್ಯವಹಾರ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹೌದು, ನಟಿ ರನ್ಯಾ ರಾವ್ಗೆ ಜೈಲು ಸೆರೆವಾಸ ಅನುಭವಿಸುತ್ತಿರುವ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಜಾಮೀನು ಮಂಜೂರಾಗಿದ್ದರೂ ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ ಎಂಬಂತಾಗಿದೆ.
ಗೋಲ್ಡ್ ಕಳ್ಳ ಸಾಗಾಣಿಕೆ ಕೇಸ್ ನಲ್ಲಿ ಎ1 ಆರೋಪಿ ರನ್ಯಾ ಹಾಗೂ ಎ2 ಆರೋಪಿ ತರುಣ್ ಇಬ್ಬರಿಗೂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕಿದ್ರೂ ನಟಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಇನ್ನು ಕಳ್ಳ ಸಾಗಾಣಿಕೆ 60 ದಿನ ಕಳೆದರೂ ಡಿಆರ್ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಬ್ಬರು ಶ್ಯೂರಿಟಿ, 2 ಲಕ್ಷ ರೂ. ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ಅಲ್ಲದೇ ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾದಂತೆ ಹಾಗೂ ದೇಶ ಬಿಟ್ಟು ಹೊರಗೆ ಹೋಗದಂತೆ ಸೂಚನೆ ನೀಡಿದೆ. ಇದನ್ನೂ ಓದಿ: ಕಾಟೇರನಿಗೆ ಬಿಗ್ ರಿಲೀಫ್!
ರನ್ಯಾ ರಾವ್ ಮತ್ತು ಪ್ರಕರಣದ ಇತರ ಇಬ್ಬರು ಆರೋಪಿಗಳು ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ಈ ಪ್ರಕರಣವನ್ನು ಡಿಆರ್ಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ.
