ದೆಹಲಿ: ಇಡೀ ದೇಶದಾದ್ಯಂತ ಈಗಾಗಲೇ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಹಾಗೂ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೆಸರು ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರು ಕೇಳಿ ಬಂದಿದೆ.
ಹೌದು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಚಾರ್ಜ್ಶೀಟ್ ನಲ್ಲಿ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಅವರ ಹೆಸರು ಉಲ್ಲೇಖಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ ಹಾಗಾಗಿ ಡಿಕೆ ಬ್ರದರ್ಸ್ ಗೆ ಇಡಿ ಸಂಕಷ್ಟ ಎದುರಾಗಿದೆ. ಇದನ್ನೂ ಓದಿ: HDK ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ: ಸಿಎಂ
ಇನ್ನು ಹೈಕಮಾಂಡ್ ಸೂಚನೆ ಮೇರೆಗೆ ದೇಣಿಗೆ ನೀಡಲಾಗಿದೆ ಎಂದು ಇಡಿ ಆರೋಪ ಮಾಡಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ 142 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಇಡಿ ಈ ಮೊದಲು ಆರೋಪಸಲಾಗಿತ್ತು.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡಿಕೆ ಬ್ರದರ್ಸ್ ಗೆ ಇಡಿ ಸಂಕಷ್ಟ ಎದುರಾಗುತ್ತಾ ಎಂದು ಕಾದು ನೋಡಬೇಕಿದೆ.
