Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೈಸೂರು ಸ್ಯಾಂಡಲ್ ಸೋಪ್ ಗೆ ಪ್ರತಿ ಕನ್ನಡಿಗರು ರಾಯಭಾರಿಗಳು: ರಮ್ಯಾ
  • Bangalore

ಮೈಸೂರು ಸ್ಯಾಂಡಲ್ ಸೋಪ್ ಗೆ ಪ್ರತಿ ಕನ್ನಡಿಗರು ರಾಯಭಾರಿಗಳು: ರಮ್ಯಾ

admin May 24, 2025 1 minute read
Spread the love

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ ಗೆ ಬೇರೆ ರಾಜ್ಯದ ನಟಿ ತಮನ್ನಾ ಭಾಟಿಯಾ ಅವರು ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುವುದರ ಜೊತೆಗೆ ಕನ್ನಡ ಚಿತ್ರರಂಗದ ನಟಿಯರು ಕೂಡ ಆಕ್ರೋಶ ಹೊರಹಾಕುತ್ತಿದ್ದಾರೆ.

ಇನ್ನು ಈ ಕುರಿತು ಮೋಹಕ ತಾರೆ ರಮ್ಯಾ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಾಕುವ ಮೂಲಕ ಆಕ್ರೋಶ ಅವರ ಹಾಕಿದ್ದಾರೆ.

ಇಂದು ಒಂದು ವಸ್ತುವನ್ನು ಮಾರುಕಟ್ಟೆಯಲ್ಲಿ ಪ್ರಚಾರ ಮಾಡಲು ಹತ್ತಾರು ದಾರಿಗಳಿರುತ್ತವೆ. ರಾಯಭಾರಿ ನೇಮಕ ಮಾಡಿ ಪ್ರಚಾರ ಮಾಡುವ ಅಗತ್ಯವಿಲ್ಲ. ಇದು ತೆರಿಗೆ ಪಾವತಿದಾರರ ಹಣ ದುರುಪಯೋಗವಷ್ಟೆ ಹೊರತು ಏನೂ ಪ್ರಯೋಜನವಿಲ್ಲ. ಇಂದು ಸೆಲೆಬ್ರಿಟಿಗಳು ಬಳಸುತ್ತಾರೆ ಎಂಬ ಮಾತ್ರಕ್ಕೆ ಜನರು ವಸ್ತುಗಳನ್ನು ಖರೀದಿಸುವುದಿಲ್ಲ. ನಾವು ಸೋಪ್ ಬಳಸಿದರೆ ನಟಿಯ ರೀತಿ ಆಗುವುದಿಲ್ಲ ಎಂಬುದು ಜನತೆಗೆ ಚೆನ್ನಾಗಿ ಗೊತ್ತಿದೆ. ಜನರು ಅದನ್ನು ಮೆಚ್ಚಿ ಖರೀದಿಸಿ ಬಳಸಬೇಕೆಂದರೆ ವಸ್ತುವಿನ ಗುಣಮಟ್ಟವಿರಬೇಕು. ಇದನ್ನೂ ಓದಿ: ಮೈಸೂರು ಸ್ಯಾಂಡಲ್ ಸೋಪ್ ಗೆ ತಮನ್ನಾ ರಾಯಭಾರಿಯಾಗಿ: ವಿವಾದಕ್ಕೆ ಸ್ಪಷ್ಟನೆ ಕೊಟ್ಟ MB ಪಾಟೀಲ್

ಕರ್ನಾಟಕದಲ್ಲಿ ಮೈಸೂರು ಸ್ಯಾಂಡಲ್ ಸೋಪ್​ಗೆ ದೀರ್ಘ ಇತಿಹಾಸವಿದೆ. ಪರಂಪರೆಯಿದೆ. ಪ್ರತಿ ಕನ್ನಡಿಗರು ಅದರ ರಾಯಭಾರಿಗಳು. ಮೈಸೂರು ಸ್ಯಾಂಡಲ್ ಸೋಪ್ ಅನ್ನು ಜಗತ್ತಿಗೆ ಪರಿಚಯಿಸಲು ಪ್ರತಿಯೊಬ್ಬರನ್ನೂ ಒಗ್ಗೂಡಿಸಿ. ಅದನ್ನು ಕನ್ನಡಿಗರು ಪ್ರೀತಿಯಿಂದ ಖುಷಿಯಿಂದ ಮಾಡುತ್ತಾರೆ. ಸಂಘಟಿತವಾಗಿ, ಸೃಜನಶೀಲವಾಗಿ ಗ್ರಾಹಕರೊಂದಿಗೆ ಸಂಬಂಧ ಹೊಂದುವುದು ಮುಖ್ಯವಾಗುತ್ತದೆ. ಆಪಲ್ ಬಹಳ ಯಶಸ್ವಿ ಉದ್ಯಮವಾಗಿ ಬೆಳೆದಿದೆ, ಆದರೆ ಅದಕ್ಕೆ ಸಂಭಾವನೆ ನೀಡಿ ನೇಮಿಸಿದ ಬ್ರಾಂಡ್ ಅಂಬಾಸಿಡರ್ ಇರಲಿಲ್ಲ ಎಂದು ಕೂಡ ನಟಿ ರಮ್ಯಾ ಖಂಡನೆ ವ್ಯಕ್ತಪಡಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: CET ಫಲಿತಾಂಶ ಪ್ರಕಟ
Next: ಮತ್ತೆ ಕೊರೊನಾ; ಮಾಸ್ಕ್ ಧರಿಸಿ ಮನವಿ ಸ್ವೀಕರಿಸಿದ ಸಿಎಂ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.