ಬೆಂಗಳೂರು: ಕಳೆದ ಮೂರು ನಾಲ್ಕು ವರ್ಷಗಳ ಹಿಂದೆ ಇಡೀ ಜಗತ್ತಿನಾದ್ಯಂತ ಲಕ್ಷಾಂತರ ಜೀವಗಳನ್ನು ಬಲಿಪಡಿಸಿದ್ದ ಕೊರೊನಾ ವೈರಸ್ ಮತ್ತೆ ರಾಷ್ಟ್ರದ ರಾಜಧಾನಿ ದೆಹಲಿ ಸೇರಿದಂತೆ ಕರ್ನಾಟಕ ರಾಜ್ಯಕ್ಕೂ ಒಕ್ಕರಿಸಿರುವುದರಿಂದ ಜನ ಭಯಭೀತರಾಗಿದ್ದಾರೆ. ಇನ್ನು ನಾಳೆಯಿಂದ (ಮೇ 29) ರಿಂದ ರಾಜ್ಯದಲ್ಲಿ ಶಾಲೆಗಳು ಪುನರಾರಂಭವಾಗುತ್ತಿರುವುದರಿಂದ ಮಕ್ಕಳು ಹಾಗೂ ಪೋಷಕರಿಗೆ ಢವಢವ ಶುರುವಾಗಿದೆ.
ಇನ್ನು ಕೊರೊನಾ ಹೆಚ್ಚುತ್ತಿರುವ ಕಾರಣ ಶಾಲೆಗಳಿಗೆ ಯಾವುದೇ ಮಾರ್ಗಸೂಚಿಯನ್ನು ಬಿಡುಗಡೆ ಮಾಡುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವರಾಗಿರುವಂತ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಬಗ್ಗೆ ಈವರೆಗೂ ಆರೋಗ್ಯ ಇಲಾಖೆ ಯಾವುದೇ ವರ್ಗ ಸೂಚಿ ಬಿಡುಗಡೆ ಮಾಡಿಲ್ಲ ಹಾಗಾಗಿ ಶಾಲೆಗಳಿಗೂ ಯಾವುದೇ ಮಾರ್ಗಸೂಜಿ ಇಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳನ್ನು ಶಾಲೆಗೆ ಕಳಿಸಬೇಕೆಂದು ಪೋಷಕರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಆರ್ ಅಶೋಕ & ವಿಜಯೇಂದ್ರ ಅಸಮರ್ಥರು: ಡಿಕೆ ಸುರೇಶ್
ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ಕೊಟ್ಟರೆ ಅದನ್ನ ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ ಕೊಡುವ ಮಾರ್ಗಸೂಚಿಯನ್ನೂ ನಾವು ಜಾರಿ ಮಾಡುತ್ತೇವೆ. ಇಲ್ಲಿವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ ಎಂದಿದ್ದಾರೆ.
