ಬೆಂಗಳೂರು: ನಟ ಶ್ರೀಧರ್ ನಾಯಕ್ (42 ವರ್ಷ) ಕಳೆದ ಆರು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು (ಮಂಗಳವಾರ ಮೇ 27) ರಂದು ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಇನ್ನು ತಮ್ಮ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಆರ್ಥಿಕ ಸಹಾಯ ಕೋರಿದ್ದರು. ಆದರೆ ಅಭಿಮಾನಿಗಳ ಪ್ರಾರ್ಥನೆ ಫಲಿತದೆ ವಿಧಿವಶರಾಗಿದ್ದಾರೆ.
ಪಾರು ಧಾರಾವಾಹಿ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಧಾರಾವಾಹಿಯಲ್ಲಿ ನಟಿಸಿದ ಅವರು ಇತ್ತೀಚಿಗಷ್ಟೇ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾದಲ್ಲಿ ನಟನೆ ಮಾಡಿದ್ರು. ಇದನ್ನೂ ಓದಿ: ಕಾಂತಾರ 2: ಸಿನಿಮಾ ಚಿತ್ರೀಕರಣ ಸಂದರ್ಭದಲ್ಲಿ ಕಲಾವಿದನ ಸಾವು
42ನೇ ವರ್ಷಕ್ಕೆ ಶ್ರೀಧರ್ ನಾಯಕರವರು ತಮ್ಮ ಬದುಕಿನ ಪಯಣವನ್ನು ಮುಗಿಸಿದ್ದಾರೆ. ಗುರುತೇ ಸಿಗದಷ್ಟು ಬದಲಾಗಿ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು.
