ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಶಾಸಕ ಜನಾರ್ಧನ್ ರೆಡ್ಡಿ ಅವರು ಏಳು ವರ್ಷ ಜೈಲು ಸೆರೆವಾಸ ಅನುಭವಿಸಿ ಬಂದು ಮತ್ತೆ ಇದೀಗ ಅಕ್ರಮ ಗಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೆರಾವಾಸ ಅನುಭವಿಸುತ್ತಿರುವ ಜನಾರ್ಧನ್ ರೆಡ್ಡಿ ಅವರನ್ನು ಬೆಂಗಳೂರಿನಲ್ಲಿರುವ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಹೌದು, ಇಂದು (ಮಂಗಳವಾರ ಮೇ 27) ರಂದು ಬಾಡಿ ವಾರಂಟ್ ಮೇಲೆ ರೆಡ್ಡಿಯನ್ನು ಹೈದರಾಬಾದ್ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾ. ಸಂತೋಷ್ ಗಜಾನನ್ ಭಟ್ ಅವರು ಜನಾರ್ದನ ರೆಡ್ಡಿ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡುವಂತೆ ಆದೇಶ ಪ್ರಕಟಿಸಿ ಮುಂದಿನ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿಕೆ ಮಾಡಿದರು. ಇದನ್ನೂ ಓದಿ: ಪ್ರಧಾನಿ ಕರೆದ ಸಭೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯನವರಿಗೆ ಸಮಯವಿಲ್ಲವೇ?: ಆರ್.ಅಶೋಕ್
ಇನ್ನು ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ನ್ಯಾಯಾಲಯ ದೋಷಿಯೆಂದು ಘೋಷಿಸಿ, 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಮೇ 06, 2025 ರಂದು ಪ್ರಕಟಗೊಂಡಿತ್ತು. ಪ್ರಕರಣವು ಬಳ್ಳಾರಿ ಜಿಲ್ಲೆಯ ಓಬಳಾಪುರಂ ಗಣಿಗಾರಿಕೆಯಲ್ಲಿ ನಡೆದಿದ್ದ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದ್ದು, ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಮತ್ತು ಗಣಿಗಾರಿಕೆ ನಿಯಮಗಳ ಉಲ್ಲಂಘನೆಯ ಆರೋಪಗಳು ಹೊರಿಸಲಾಗಿತ್ತು. ಈ ಸಂಬಂಧ ಇದೀಗ ಜನಾರ್ಧನ್ ರೆಡ್ಡಿ ಅವರನ್ನು ಹೈದರಾಬಾದ್ ಜೈಲಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.
