ಬೆಂಗಳೂರು: ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದಾಗಿ ಅದೆಷ್ಟೋ ಹೆಣ್ಣು ಮಕ್ಕಳು ತಮ್ಮ ಸಿಂಧೂರವನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ.
ಹೆಣ್ಣು ಮಕ್ಕಳ ಸಿಂಧೂರ ಅಳಿಸಿದ ಉಗ್ರರ ಹೆಡೆಮುರಿ ಕಟ್ಟಲು ಆಪರೇಷನ್ ಸಿಂಧೂರದ ಮೂಲಕ ಭಾರತೀಯ ಸೇನೆ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿ ಪ್ರತಿಕಾರ ತೀರಿಸಿಕೊಂಡಿದೆ.
ಇನ್ನು ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರದ ಮೂಲಕ ಕಾರ್ಯಚರಣಿಯಲ್ಲಿ ಭಾಗಿಯಾಗಿದ್ದ ಸೈನಿಕರನ್ನು ಇಡೀ ದೇಶವೇ ಕೊಂಡಾಡಿದ್ದು, ತಿರಂಗಾ ಯಾತ್ರೆಗಳ ಮೂಲಕ ಸೈನಿಕರಿಗೆ ಗೌರವ ಸಲ್ಲಿಸುತ್ತಿದ್ದಾರೆ.
ಇನ್ನು ಕರ್ನಾಟಕ ರಾಜ್ಯದಲ್ಲಿ ಕಳೆದ ವಾರ ತಿರಂಗಾ ಯಾತ್ರೆ ಮೂಲಕ ಕಾಂಗ್ರೆಸ್ ಪಕ್ಷವು ಸೈನಿಕರಿಗೆ ಗೌರವ ಸಲ್ಲಿಸಿತ್ತು.
ಹೌದು, ಇಂದಿನಿಂದ ದೇಶಾದ್ಯಂತ ಪಾಕಿಸ್ತಾನದ ಸೇನಾ ಕಾರ್ಯಾಚರಣೆಯಲ್ಲಿ ಭಾಗಿಯಾದ ಸೈನಿಕರನ್ನು ಗೌರವಿಸುವ ಜೈಹಿಂದ್ ಅಭಿಯಾನ ಹಮ್ಮಿಕೊಂಡಿದೆ. ಬೆಂಗಳೂರಿನ ಟೌನ್ ಹಾಲ್ ನಲ್ಲಿ ಕೆಪಿಸಿಸಿ ವತಿಯಿಂದ ಜೈಹಿಂದ್ ಅಭಿಯಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಧರನ್ನು ಗೌರವಿಸುವ ಮೂಲಕ ಚಾಲನೆ ನೀಡಿದರು. ಇದನ್ನೂ ಓದಿ: ಗ್ರಾಮೀಣ ಯುವ ಸಮೂಹವನ್ನು ಸಬಲರನ್ನಾಗಿಸುವುದೇ ನಮ್ಮ ಗುರಿ: ಶರಣ್ ಪ್ರಕಾಶ್ ಪಾಟೀಲ್
ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಯೋಧರನ್ನು ಗೌರವಿಸಿದರು.
