Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೇ 30, 31ಕ್ಕೆ DC, CEO ಗಳ ಜೊತೆ ಸಿಎಂ ಸಭೆ
  • Bangalore
  • Front news
  • Politics
  • State

ಮೇ 30, 31ಕ್ಕೆ DC, CEO ಗಳ ಜೊತೆ ಸಿಎಂ ಸಭೆ

admin May 28, 2025 1 minute read
Spread the love

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು (ಬುಧವಾರ ಮೇ 28) ರಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು.

ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್‌ ನಿಂದ ಯೋಧರಿಗೆ ಜೈಹಿಂದ್‌ ಗೌರವ

ಈ ಬಗ್ಗೆ ಸಮಗ್ರ ಅವಲೋಕನ‌ ನಡೆಸಲು, ಮೇ 30, 31 ರಂದು DC, CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.

ಸದ್ಯ ತೆಗೆದುಕೊಂಡಿರುವ ಕ್ರಮಗಳು

ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ, ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ, ಆಶ್ರಯ ತಾಣಗಳನ್ನು ಗುರುತಿಸಲಾಗಿದೆ.

ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ.

ಮೇ-26, 2025 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ.

ಮೇ-26, 2025 ರಂತೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ ಖಾತೆಯಲ್ಲಿ ರೂ.97,351.95 ಲಕ್ಷಗಳು ಅನುದಾನವಿರುತ್ತದೆ.

About the Author

admin

Administrator

Visit Website View All Posts

Spread the love

Post navigation

Previous: ರಾಜ್ಯ ಕಾಂಗ್ರೆಸ್‌ ನಿಂದ ಯೋಧರಿಗೆ ಜೈಹಿಂದ್‌ ಗೌರವ
Next: ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ರಾಜಿ ಆಗಬಾರದು: ಸಿಎಂ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.