Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ: ಡಿಕೆಶಿ
  • Bangalore
  • Front news
  • Politics
  • State

ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ: ಡಿಕೆಶಿ

admin May 28, 2025 1 minute read
Spread the love

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ (ಕಾರ್ಪೊರೇಷನ್) ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನಗರದ ಟೌನ್ ಹಾಲ್ ನಲ್ಲಿ ಇಂದು (ಬುಧವಾರ ಮೇ 28) ರಂದು ನಡೆದ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ದೇಶಕ್ಕೆ ಸೇವೆ ಸಲ್ಲಿಸಿದ ಹಿರಿಯ ಸೇನಾಧಿಕಾರಿಗಳು ಹಾಗೂ ಮಾಜಿ ಯೋಧರು, ಹುತಾತ್ಮರಾದ ಯೋಧರ ಕುಟುಂಬ ಸದಸ್ಯರನ್ನು ಸನ್ಮಾನಿಸಿದ ನಂತರ ಶಿವಕುಮಾರ್ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಸೈನಿಕರ ವಿಭಾಗದ ಅಧ್ಯಕ್ಷರಾದ ಮಲ್ಲಿಕಾರ್ಜುನ ಅವರ ಸಲಹೆ ಮೇರೆಗೆ ಕಾರ್ಪೊರೇಷನ್ ರಚಿಸಲು ಆಲೋಚಿಸುತ್ತಿದ್ದೇವೆ. ನಮ್ಮ ದೇಶಕ್ಕೆ ಸೇವೆ ಸಲ್ಲಿಸಿರುವ ಯೋಧರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ರಾಜಿ ಆಗಬಾರದು: ಸಿಎಂ

ಇಂತಹ ಅತ್ಯಂತ ಮಹತ್ವದ ಕಾರ್ಯಕ್ರಮದ ಭಾಗವಾಗಿರುವುದು ಹೆಮ್ಮೆಯ ವಿಚಾರ. ದೇಶಕ್ಕೆ ಶಕ್ತಿ ತುಂಬಿರುವ ನಿಮ್ಮಲ್ಲರಿಗೆ ದೇಶ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಕಾಂಗ್ರೆಸ್ ಪಕ್ಷ ಸದಾ ದೇಶ ಹಾಗೂ ನಮ್ಮ ಸಶಸ್ತ್ರ ಪಡೆಗಳ ಪರವಾಗಿ ನಿಲ್ಲಲಿದೆ. ನಿಮ್ಮ ಕೊಡುಗೆಯನ್ನು ಸದಾ ಸ್ಮರಿಸಲಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ರಾಜಿ ಆಗಬಾರದು: ಸಿಎಂ
Next: ಶಾಲಾ ಆರಂಭಕ್ಕೆ ಭರ್ಜರಿ ಸಿದ್ಧತೆ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.