ಕರ್ನಾಟಕ ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ತಾಂಡವವಾಡುತ್ತಿದ್ದು, ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆಯ ಕ್ರಮವಾಗಿ ಆಸ್ಪತ್ರೆಗಳಲ್ಲಿ ಕೊರೊನಾ ಟೆಸ್ಟಿಂಗ್ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.
ಇನ್ನು ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲಿ ಎನ್ ಎಚ್ ಎಮ್ ವೈದ್ಯರಿಗೆ ಹಾಗೂ ನರ್ಸ್ಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇದನ್ನೂ ಓದಿ: ಆರ್ಸಿಬಿ ತಂಡಕ್ಕೆ ವಿಶ್ ಮಾಡಿದ ವಿಜಯ ಮಲ್ಯ
ಹೌದು, ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸಲು ತಜ್ಞ ವೈದ್ಯರಿಗೆ ಆರೋಗ್ಯ ಇಲಾಖೆ ಭರ್ಜರಿ ಗಿಫ್ಟ್ ನೀಡಿದೆ. NHM ಅಡಿಯಲ್ಲಿ ನೇಮಕವಾಗುವ ಗುತ್ತಿಗೆ ವೈದ್ಯರ ವೇತನವನ್ನ ಹೆಚ್ಚಿಸಿ ಆದೇಶಿಸಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
