ಬೆಂಗಳೂರು: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಕಳೆದ ಎರಡು ತಿಂಗಳಿಂದ ಖಾತೆಗೆ ಜಮಾ ಆಗದಿದ್ದ ಕಾರಣ ಜೂನ್ ಮೊದಲನೇ ವಾರದಲ್ಲಿ ಕುಟುಂಬದ ಯಜಮಾನಿ ಖಾತೆಗೆ ಜಮಾ ಆಗಲಿದೆ ಎಂದು ತಿಳಿದುಬಂದಿದೆ.
ಹೌದು, ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ಅಂತೆ ಈಗಾಗಲೇ ಕಳೆದ ಎರಡು ವರ್ಷದಿಂದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುತ್ತಿದ್ದು, ಕಳೆದ 2 ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದೆದ್ದ ಕಾರಣ ವಿರೋಧ ಪಕ್ಷದ ನಾಯಕರು ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಟೀಕೆ ಮಾಡುತ್ತಿದ್ದರು.
ಈ ಸಂಬಂಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯಿಸಿ ಒಂದು ವಾರದೊಳಗಾಗಿ ಗೃಹಲಕ್ಷ್ಮಿಯರ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲವು ತಾಂತ್ರಿಕ ಅಡಚಣೆಗಳಿಂದಾಗಿ ಹಣ ಹಾಕಲು ಆಗಲಿಲ್ಲ ಹಾಗಾಗಿ ಜೂನ್ ಮೊದಲನೇ ವಾರದಲ್ಲಿ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ಹಣ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ.
